ಮೈಸೂರು, ಮೇ.24: ಕೆ ಎಂ ಪಿ ಕೆ ಟ್ರಸ್ಟ್ 18ನೇ ವಾರ್ಷಿಕೋತ್ಸವದ ಅಂಗವಾಗಿ ಚಾಣಕ್ಯ ಸೇವಾ ರತ್ನ ಪ್ರಶಸ್ತಿಗೆ
ಅರ್ಜಿ ಆಹ್ವಾನಿಸಲಾಗಿದೆ
ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್
2023-24ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಹಾಗೂ ಅಂರರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರಿಗೆ ಚಾಣಕ್ಯ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಿದೆ.ಅದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಶಿಕ್ಷಣ, ಕಲೆ, ಸಾಹಿತ್ಯ, ಸಂಗೀತ, ಕ್ರೀಡೆ ಸಾಂಸ್ಕೃತಿಕ, ಬಹುಮುಖ ಪ್ರತಿಭೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದವರು,ಅರ್ಜಿ ಸಲ್ಲಿಸಬಹುದಾಗಿದೆ.
ಈಗಾಗಲೇ ಪ್ರಶಸ್ತಿ ಪಡೆದವರು ಕೂಡಾ ಅರ್ಜಿ ಸಲ್ಲಿಸಬಹುದು. ಅರ್ಹರು ಪ್ರಶಸ್ತಿಗಾಗಿ ಸ್ವಯಂ ದೃಢೀಕೃತ ನಕಲು ದಾಖಲೆಗಳು ಹಾಗೂ ಸ್ವವಿವರದೊಂದಿಗೆ ಮೇ 25 ರೊಳಗೆ 89713 89539 ವಾಟ್ಸಪ್ ಮೂಲಕ ಅರ್ಜಿ ಸಲ್ಲಿಸಬೇಕೆಂದು ಕೆಎಂಪಿ ಕೆ ಟ್ರಸ್ಟ್ ಸಂಚಾಲಕರಾದ ರೇಖಾ ಶ್ರೀನಿವಾಸ್ ಮನವಿ ಮಾಡಿದ್ದಾರೆ.
ಮೇ 27ರಂದು ಬೆಳಗ್ಗೆ 11 ಗಂಟೆಗೆ ನಗರದ ಎಂಜಿ ರಸ್ತೆಯಲ್ಲಿರುವ ಸಿಪಾಯಿ ಗ್ರಾಂಡ್ ಹೋಟೆಲ್ ನಲ್ಲಿ ಚಾಣಕ್ಯ ಸೇವಾ ರತ್ನ
ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.