Fri. Mar 6th, 2026

ಫಾರ್ಮಾಸಿಸ್ಟ್ ಅಪ್ರೆಂಟಿಸ್‌ಶಿಪ್ ತರಬೇತಿಗೆ ಅರ್ಜಿ ಆಹ್ವಾನ

Share this with Friends

ಬೆಂಗಳೂರು: ದೇಶದಲ್ಲೇ ಪ್ರಥಮ ಬಾರಿಗೆ ನಮ್ಮ ರಾಜ್ಯದ ಯುವಜನತೆಗೆ ಉದ್ಯೋಗ ಕೌಶಲ್ಯ ನೀಡುವ ನಿಟ್ಟಿನಲ್ಲಿ, ಆಹಾರ ಸುರಕ್ಷತೆ ಮತ್ತು ಔಷಧ ನಿಯಂತ್ರಣ ಇಲಾಖೆಯ ವತಿಯಿಂದ ‘ಫಾರ್ಮಾಸಿಸ್ಟ್ ಅಪ್ರೆಂಟಿಸ್‌ಶಿಪ್’ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ ಇದರ ಸದುಪಯೋಗಪಡಿಸಿಕೊಳ್ಳಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರಿವ ಸಚಿವರು, ಕಳೆದ ಎರಡು ವರ್ಷಗಳಲ್ಲಿ (2022-23 ಮತ್ತು 2023-24) ಡಿ.ಫಾರ್ಮ ಉತ್ತೀರ್ಣ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಂಡು, ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ (PHCs) ಪ್ರಾಯೋಗಿಕ ಅನುಭವ ಪಡೆಯಬಹುದಾಗಿದೆ ಎಂದು ತಿಳಿಸಿದ್ದಾರೆ.

ಪ್ರಮುಖ ಅಂಶಗಳು:

-11 ತಿಂಗಳ ತರಬೇತಿ ಅವಧಿಯಲ್ಲಿ ಪ್ರತಿ ತಿಂಗಳು ₹8,000 ಪ್ರೋತ್ಸಾಹಧನ ನೀಡಲಾಗುತ್ತದೆ.

-ಮೆರಿಟ್ ಆಧಾರದ ಮೇಲೆ ಪಾರದರ್ಶಕ ಆಯ್ಕೆ

-13.01.2026 ರಿಂದ ಅರ್ಜಿ ಸಲ್ಲಿಸಲು ಅವಕಾಶವಿದ್ದು ಕೊನೆಯ ದಿನಾಂಕ 27.01.2026  ಆಗಿದೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ವೆಬ್‌ಸೈಟ್  http://kea.kar.nic.in ಮೂಲಕ ಆನ್‌ಲೈನ್‌ನಲ್ಲಿ ₹600 ಶುಲ್ಕದೊಂದಿಗೆ ಅರ್ಜಿ  ಹಾಕಬಹುದು.

ಸಶಕ್ತ ಯುವಜನತೆ, ಸಮೃದ್ಧ ಕರ್ನಾಟಕ ನಮ್ಮ ಸರ್ಕಾರದ ಗುರಿ. ನಮ್ಮ ರಾಜ್ಯದ ವಿದ್ಯಾರ್ಥಿಗಳು ಈ ತರಬೇತಿಯ ಅತಿಹೆಚ್ಚಿನ ಲಾಭ ಪಡೆದುಕೊಳ್ಳಬೇಕೆಂದು ಸಚಿವರು ಮನವಿ ಮಾಡಿದ್ದಾರೆ.


Share this with Friends

Related Post