Fri. Dec 27th, 2024

ಏ. 23ರಂದು ಬಿಳಿಗಿರಿರಂಗನಾಥಸ್ವಾಮಿ ಬ್ರಹ್ಮರಥೋತ್ಸವ

Share this with Friends

ಚಾಮರಾಜನಗರ, ಏ.18: ಜಿಲ್ಲೆಯ ಇತಿಹಾಸ ಪ್ರಸಿದ್ದ ಬಿಳಿಗಿರಿರಂಗನಾಥಸ್ವಾಮಿ ಬ್ರಹ್ಮರಥೋತ್ಸವ ಏಪ್ರಿಲ್ 23ರಂದು ನಡೆಯಲಿದೆ.

ಬ್ರಹ್ಮರಥೋತ್ಸವಕ್ಕೆ ಅಗತ್ಯ ಪೂರ್ವ ಸಿದ್ದತೆಗಳನ್ನು ಅಚ್ಚುಕಟ್ಟಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅಧಿಕಾರಿಗಳಿಗೆ ಸೂಚಿಸಿದರು.

ರಥೋತ್ಸವ ಅಂಗವಾಗಿ ದೇವಾಲಯದ ಆವರಣ, ರಥದ ಬೀದಿ, ಕಲ್ಯಾಣಿ ಕೊಳದ ಬಳಿ, ಕಮರಿ ಅವರಣ, ದಾಸೋಹ ಆವರಣ, ಪಾರ್ಕಿಂಗ್ ವ್ಯವಸ್ಥೆ ಮತ್ತಿತ್ತರ ಜನನಿಬಿಡ ಸ್ಥಳಗಳಲ್ಲಿ ವಹಿಸಲಾಗುವ ಬಂದೋಬಸ್ತ್ ಕ್ರಮಗಳು ಸಮರ್ಪಕವಾಗಿರಬೇಕು ಎಂದು ಸೂಚಿಸಿದರು.

ರಥೋತ್ಸವ ಸಿದ್ದತೆಗಳ ವ್ಯವಸ್ಥೆಯಲ್ಲಿ ಯಾವುದೇ ಲೋಪಗಳಿಗೆ ಆಸ್ಪದವಾಗದಂತೆ ಎಚ್ಚರ ವಹಿಸಬೇಕು. ಸಾರ್ವಜನಿಕರಿಂದ ಯಾವುದೇ ದೂರುಗಳು ಬರದಂತೆ ಅಧಿಕಾರಿಗಳು ಕ್ರಮವಹಿಸಬೇಕು ಎಂದು ತಿಳಿಸಿದರು.

ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪಾರ್ಕಿಂಗ್ ಸ್ಥಳ ಸೇರಿದಂತೆ ಇತರೆಡೆ ರಾಜಕೀಯ ಪ್ರೇರಿತವಾದ ಯಾವುದೇ ಬ್ಯಾನರ್, ಭಿತ್ತಿಪತ್ರಗಳ ಅಳವಡಿಕೆಗೆ ಹಾಗೂ
ಪ್ರವಾಸಿ ಮಂದಿರಕ್ಕೆ ಯಾವುದೇ ರಾಜಕೀಯ ವ್ಯಕ್ತ್ತಿಗಳಿಗೆ ಪ್ರವೇಶಕ್ಕೆ ಅವಕಾಶವಿಲ್ಲ ಎಂದು ತಿಳಿಸಿದರು.

ಇದಕ್ಕಾಗಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿಗಳ ಕಚೇರಿ ಹಾಗೂ ಉಪವಿಭಾಗಾಧಿಕಾರಿಗಳ ಕಚೇರಿ, ಮೊ. ಸಂಖ್ಯೆ: 8884504666 ಕೊಳ್ಳೇಗಾಲ. ಮತ್ತು ಇ-ಮೇಲ್ ackollegala@gmail.com ಇವರನ್ನು ಸಂಪರ್ಕಿಸಬಹುದು ಎಂದು ಶಿಲ್ಪಾನಾಗ್ ತಿಳಿಸಿದರು.

ಬ್ರಹ್ಮರಥೋತ್ಸವ ಹಿನ್ನೆಲೆಯಲ್ಲಿ ಏಪ್ರಿಲ್ 21ರಿಂದ 25ರವರೆಗೆ ಭಕ್ತಾಧಿಗಳು ಕ್ಷೇತ್ರಕ್ಕೆ ಹೋಗಿಬರಲು ಹೆಚ್ಚು ಸಂಖ್ಯೆಯಲ್ಲಿ ಕೆ.ಎಸ್.ಆರ್.ಟಿಸಿ ಬಸ್ಸುಗಳ ನಿಯೋಜನೆ ಮಾಡಬೇಕು. ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಬೇಕು. ಸ್ವಚ್ಚತೆಗೆ ವಿಶೇಷ ಗಮನ ಹರಿಸಬೇಕು ಎಂದು ಸೂಚಿಸಿದರು


Share this with Friends

Related Post