Mon. Dec 23rd, 2024

ಸಿಎಂ ಗೆ ಪ್ರಶ್ನೆ ಕೇಳಿ ಉತ್ತರಿಸುವಂತೆ ಆಗ್ರಹಿಸಿರುವ ಅಶೋಕ್

Share this with Friends

ಬೆಂಗಳೂರು, ಜು.2: ಮೈಸೂರಿನ ಮುಡಾದಲ್ಲಿ 4,000 ಕೋಟಿ ಗುಳುಂ ಮಾಡಿ ಸಿದ್ದರಾಮಯ್ಯ ಮತ್ತೆ ಕೈಚಳಕ ತೋರಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್‌ ದೂರಿದ್ದಾರೆ.

ಗೋಲ್ಮಾಲ್ ಸಿಎಂ ಸಿದ್ದರಾಮಯ್ಯ ನವರೇ, ಈ ಪ್ರಶ್ನೆಗಳಿಗೆ ನಿಮ್ಮ ಬಳಿ ಉತ್ತರವಿದೆಯೇ ಎಂದು ಆರ್.ಅಶೋಕ್ ಟ್ವೀಟ್ ಮಾಡಿ ಪ್ರಶ್ನೆಗಳನ್ನು ಕೇಳಿದ್ದಾರೆ.

ಸಿದ್ದರಾಮಯ್ಯ ನವರೇ, ತಮ್ಮ ಧರ್ಮ ಪತ್ನಿ ಅವರ ಹೆಸರಿನಲ್ಲೂ ನಿಯಮ ಬಾಹಿರವಾಗಿ ನಿವೇಶನ ವರ್ಗಾವಣೆ ಆಗಿರುವ ಸುದ್ದಿ ಹೊರಬಂದಿದೆಯಲ್ಲ ಅದನ್ನ ಹೇಗೆ ಸಮರ್ಥಿಸಿ ಕೊಳ್ಳುತ್ತೀರಿ.

ಆರೋಪ ಕೇಳಿಬಂದಿರುವ ಮುಡಾ ಅಧಿಕಾರಿಗಳನ್ನ ಅಮಾನತು ಮಾಡದೆ, ಕೇವಲ ವರ್ಗಾವಣೆ ಮಾಡಿ ಕೈತೊಳೆದುಕೊಂಡಿದ್ದೀರಲ್ಲ, ಯಾರನ್ನು ರಕ್ಷಣೆ ಮಾಡಲು ಹೊರಟಿದ್ದೀರಿ.

4,000 ಕೋಟಿ ರೂಪಾಯಿ ಮೌಲ್ಯದ ಈ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣವನ್ನ ಸಿಬಿಐಗೆ ವಹಿಸಬೇಕು ಅಥವಾ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ತನಿಖಾ ಆಯೋಗಕ್ಕೆ ನೀಡಬೇಕು.

ಅದು ಬಿಟ್ಟು ತನಿಖೆಗೆ ಇಬ್ಬರು ಐಎಎಸ್ ಅಧಿಕಾರಿಗಳನ್ನ ನೇಮಿಸಿ ಪ್ರಕರಣವನ್ನ ಮುಚ್ಚಿಹಾಕಲು ಹೊರಟಿದ್ದೀರಲ್ಲಾ ಹಗರಣದಲ್ಲಿ ತಮ್ಮ ಪಾಲೆಷ್ಟಿದೆ ಉತ್ತರಿಸಿ

ಸಚಿವ ಸಂಪುಟದ ಅನುಮತಿ ಪಡೆಯದೆ ಮನಸ್ಸಿಗೆ ಬಂದಂತೆ ನಿವೇಶನ ನೀಡಲು ಅನುಮತಿ ನೀಡಿದ್ದು ಯಾರು,
ನಿಮ್ಮ ತವರು ಜಿಲ್ಲೆಯಲ್ಲಿ, ಸ್ವಂತ ಊರಿನಲ್ಲಿ, ತಮ್ಮ ಆಪ್ತ ಸಚಿವರ ಇಲಾಖೆಯಲ್ಲಿ, ಇಂಥದ್ದೊಂದು ಬೃಹತ್ ಹಗರಣ ತಮ್ಮ ಗಮನಕ್ಕೆ ಬಾರದೆ, ತಮ್ಮ ಕೈವಾಡವಿಲ್ಲದೆ ನಡೆಯಲು ಸಾಧ್ಯವೇ ಇದಕ್ಕೆಲ್ಲಾ ಉತ್ತರಿಸಿ ಎಂದು ಅಶೋಕ್ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ.


Share this with Friends

Related Post