Fri. Dec 27th, 2024

ಸಿದ್ದರಾಮಯ್ಯ ವಿರುದ್ಧ ಅಶೋಕ್ ಟೀಕೆ

Share this with Friends

ಬೆಂಗಳೂರು, ಜು.12: ಮುಡಾ ಭೂಹಗರಣದಲ್ಲಿ ಕಾನೂನಿನ ಕುಣಿಕೆ ಬಿಗಿಯಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ಅವರು ಜಾತಿ ಹೆಸರಿನಲ್ಲಿ ರಕ್ಷಣೆ ಪಡೆಯುವ ಹತಾಶ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಅಶೋಕ್ ಟೀಕಿಸಿದ್ದಾರೆ.

ಸಿದ್ದರಾಮಯ್ಯನವರೇ, ತಮ್ಮ ನಾಯಕ ರಾಹುಲ್ ಗಾಂಧಿ ಅವರು ಮೋದಿ ಉಪನಾಮದ ಬಗ್ಗೆ ನಿಂದನೆ ಮಾಡಿ ನ್ಯಾಯಾಲಯದಲ್ಲಿ ಛೀಮಾರಿ ಹಾಕಿಸಿಕೊಂಡರಲ್ಲ, ಹಿಂದುಳಿದ ವರ್ಗದ ವ್ಯಕ್ತಿಯೊಬ್ಬ ಎರಡು ಬಾರಿ ಪ್ರಧಾನ ಮಂತ್ರಿ ಆದರಲ್ಲ ಅನ್ನುವ ಹೊಟ್ಟೆ ಉರಿಯಿಂದ ನಿಂದಿಸಿದ್ದಾ ಎಂದು ಟ್ವಿಟ್ ಮಾಡಿ ಅಶೋಕ್ ಪ್ರಶ್ನಿಸಿದ್ದಾರೆ.

ತಾವು ಮತ್ತು ತಮ್ಮ ಪಟಾಲಂ ದಿನ ಬೆಳಗಾದರೆ ಮೋದಿ ಅವರ ಬಗ್ಗೆ ವೈಯಕ್ತಿಕ ನಿಂದನೆ ಮಾಡುತ್ತೀರಲ್ಲ, ಅದು ಕೂಡ ಹಿಂದುಳಿದ ಸಮುದಾಯಕ್ಕೆ ಸೇರಿದ ಒಬ್ಬ ಚಹಾ ಮಾರುವ ವ್ಯಕ್ತಿ ಮೂರು ಭಾರಿ ಸತತವಾಗಿ ದೇಶದ ಪ್ರಧಾನಿ ಆದರಲ್ಲ ಎಂಬ ದ್ವೇಶದಿಂದಲೆ

ತಮ್ಮ ಇಡೀ ಜೀವನವೆಲ್ಲಾ ಅಹಿಂದ ಸಮುದಾಯಗಳ ಬೆನ್ನಿನ ಮೇಲೆ ಸವಾರಿ ಮಾಡಿ ಅಧಿಕಾರ ಅನುಭವಿಸಿದ ತಾವು ದಲಿತರಿಗೆ, ಹಿಂದುಳಿದವರಿಗೆ ಮಾಡಿದ್ದಾದರೂ ಏನು, ದಲಿತರ ದುಡ್ಡು ಲೂಟಿ ಹೊಡೆದಿದ್ದು, ದಲಿತರ ಕುರ್ಚಿ ಕಿತ್ತುಕೊಂಡು ಅವರಿಗೆ ಮೋಸ ಮಾಡಿದ್ದು, ಇದಿಷ್ಟೇ ನಿಮ್ಮ ಸಾಧನೆ ಎಂದು ಅಶೋಕ್ ಜರಿದಿದ್ದಾರೆ.

ಉಪ್ಪು ತಿಂದವರು ನೀರು ಕುಡಿಯಲೇ ಬೇಕು ತಮ್ಮ ಪಾಪದ ಕೊಡ ತುಂಬಿದೆ, ಪ್ರಾಯಶ್ಚಿತ ಕಾದಿದೆ ಎಂದು ಎಚ್ಚರಿಸಿದ್ದಾರೆ.


Share this with Friends

Related Post