Wed. Apr 2nd, 2025

ಅಶ್ವಿನಿ ಪುನೀತ್ ರಾಜಕುಮಾರ್ ವಿರುದ್ಧ ಅವಹೇಳನ ವಿಚಾರಕ್ಕೆ ಜನರ ಆಕ್ರೋಶ

Ashwini Puneeth Rajkumar
Share this with Friends

ಆರ್‌ಸಿಬಿ ಸೋಲಿಗೆ ಅಶ್ವಿನಿ ಅವರೇ ಕಾರಣ ಎಂದು ಸೋಷಿಯಲ್ ಮೀಡಿಯಾದಲ್ಲಿ ನಿಂದಿಸಿದ ಅನಾಮಿಕ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಮಧ್ಯೆ ನಟ ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಅವಹೇಳನ ಮಾಡಿರುವ ವಿಷಯಕ್ಕೆ ಸಾರ್ವಜನಿಕರಿಂದಲೂ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಕಳೆದ ಮಾರ್ಚ್ ತಿಂಗಳು 19ನೇ ತಾರೀಕಿನಂದು ಬೆಂಗಳೂರಿನ ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್‌ನಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರನ್ನು ಆಹ್ವಾನಿಸಿದ್ದರು. ಅದರಂತೆ ಅಶ್ವಿನಿ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರ ಐಪಿಎಲ್ ಪ್ರಾರಂಭವಾಗಿ ಆರ್‌ಸಿಬಿ ತಂಡ ಕೆಲ ಪಂದ್ಯಗಳಲ್ಲಿ ಸೋತಿದೆ.

ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ‘ಗಜಪಡೆ’ ಹೆಸರಿನ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ, ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಆರ್‌ಸಿಬಿ ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ತಂಡ ಸೋತಿದೆ ಎಂದು ನಿಂದಿಸಲಾಗಿದೆ. ಅಭಿಮಾನಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ `ಸುದೀಪ್ ಅಭಿಮಾನಿ’ ಎಂದು ಖಾತೆಯ ಹೆಸರು ಬದಲಿಸಿದ್ದಾರೆ. ಇದರ ವಿರುದ್ಧ ಅಪ್ಪು ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಕಾನೂನು ಸಮರ ಸಾರಿದ್ದಾರೆ.

ಅಶ್ವಿನಿ ಪುನೀತ್ ರಾಜ್‌ಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.


Share this with Friends

Related Post