Fri. Mar 6th, 2026

ಕೃಷ್ಣಮೃಗಗಳ ಸಾವಿಗೆ ಬ್ಯಾಕ್ಟೀರಿಯಾ ಇನ್ಫೆಕ್ಷನ್ ಕಾರಣ: ಈಶ್ವರ ಖಂಡ್ರೆ

Share this with Friends

ಬೆಂಗಳೂರು: ಬ್ಯಾಕ್ಟೀರಿಯಾ ಇನ್ಫೆಕ್ಷನ್ ನಿಂದ ಕಿತ್ತೂರು ರಾಣಿ ಚೆನ್ನಮ್ಮ ಮೃಗಾಲುದಲ್ಲಿ ಕೃಷ್ಣಮೃಗಗಳ ಸಾವು ಸಂಭವಿಸಿದ್ದು ಈ ಬಗ್ಗೆ ತನಿಖೆಗೆ ಸೂಚಿಸಿದ್ದು ತನಿಖೆಯ ವರದಿ ಆಧಾರದಲ್ಲಿಕ್ರಮ ಕೈಗೊಳ್ಳಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಯಾವುದಕ್ಕೂ ಸೋಂಕುಗಳು ತಗುಲಿತ್ತೋ ಅದರಲ್ಲಿ 30 ಮೃತಪಟ್ಟಿವೆ ಇನ್ನ ಏಳು ಆರೋಗ್ಯಕರವಾಗಿವೆ,ಅವುಗಳಿಗೆ ಆಂಟಿ ಬಯೋಟಿಕ್ ಕೊಡುತ್ತಿದ್ದಾರೆ ಈ ಸೋಂಕು ಹರಡದಂತೆ ವ್ಯವಸ್ಥೆ ಮಾಡಿದ್ದಾರೆ. ಹಗಲಿರುಳು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಅಗತ್ಯ ಎಲ್ಲಾ ಮುನ್ನೆಚ್ಚರ ಕಾರ್ಯಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ ಎಂದರು.

ಇದು ಕೊರೊನಾ ವೈರಸ್ ರೀತಿ ಕೊರೊನಾ ಮಹಾಮಾರಿ ಹೇಗೆ ಬಂದಿತ್ತೋ ಅದೇ ರೀತಿ ಇವುಗಳಿಗೆ ಬ್ಯಾಕ್ಟೀರಿಯಾ ಇನ್ಫೆಕ್ಷನ್ ಬಂದಿದೆ ಅದರಿಂದ ಈ ಅವಘಡ ಆಗಿದೆ ಇದರಲ್ಲಿ ಏನಾದರೂ ಸಮಸ್ಯೆ ಇದ್ದಲ್ಲಿ ನಮ್ಮ ಅಧಿಕಾರಿಗಳು ತನಿಖೆ ಮಾಡಿ ವರದಿ ಕೊಡಲಿದ್ದಾರೆ. ವರದಿ ಅನುಸಾರ ಕ್ರಮ ಕೈಗೊಳ್ಳಲಿದ್ದೇವೆ ಎಂದರು.

ಸಂಪುಟ ಪುನಾರಚನೆ ಸಿಎಂ ಪರಮಾಧಿಕಾರ:

ಸಚಿವ ಸಂಪುಟ ಪುನಾರಚನೆ ಮುಖ್ಯಮಂತ್ರಿಗಳ ಪರಮಾಧಿಕಾರ. ಮುಖ್ಯಮಂತ್ರಿಗಳು ವರಿಷ್ಠರು ಇದರ ಬಗ್ಗೆ ತೀರ್ಮಾನ ಮಾಡಲಿದ್ದಾರೆ, ನಮ್ಮಲ್ಲಿ ಯಾವುದೇ ಜಗ್ಗಾಟವಿಲ್ಲ ಯಾವುದೇ ಗೊಂದಲವಿಲ್ಲ, ಯಾವುದೇ ಸಮಸ್ಯೆ ಇಲ್ಲ ಬಹಳ ಅತ್ಯುತ್ತಮ ರೀತಿಯಲ್ಲಿ ಆಡಳಿತವನ್ನು ಕೊಡುತ್ತಿದ್ದೇವೆ ಕೊಟ್ಟ ಭರವಸೆಗಳನ್ನ ಈಡೇರಿಸಿದ್ದೇವೆ.ಆದರೆ ಪ್ರತಿಪಕ್ಷದವರು ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಇದರಲ್ಲಿ ಯಾವುದೇ ಹುರುಳಿಲ್ಲ ಅವರ ಆರೋಪಗಳೆಲ್ಲಾ ಎಲ್ಲಾ ಊಹಾಪೋಹಗಳು ಎಂದರು. ಇದೇ ವೇಳೆ ಕೆಪಿಸಿಸಿ ಸ್ಥಾನಕ್ಕೆ ಹೆಸರು ಕೇಳಿಬಂದಿರುವ ಕುರಿತ ಪ್ರಶ್ನೆಗೆ ಈ ಬಗ್ಗೆ ಏನೂ ಗೊತ್ತಿಲ್ಲ ಎಂದರು.


Share this with Friends

Related Post