ಬೆಂಗಳೂರಿನ, ಮಾ. 12: ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದಡಿ ಬಂಧಿತವಾಗಿರುವ ನಾಶಿಪುಡಿಗೂ ಮತ್ತು ಹಾವೇರಿಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯ ಗಲಾಟೆಗೂ ಯಾವುದೇ ಸಂಬಂಧವಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.
ಬ್ಯಾಡಗಿ ಪ್ರತಿ ವಾರದಂತೆ ಸೋಮವಾರ ಸಹ ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಗೆ ನಿರೀಕ್ಷೆಗೂ ಮೀರಿ 3.11 ಲಕ್ಷ ಮೆಣಸಿನಕಾಯಿ ಚೀಲಗಳು ಬಂದಿದ್ದವು. ಪರಿಣಾಮ ದರ ಭಾರೀ ಕುಸಿತ ಕಂಡಿದ್ದು, ರೈತರು ಆಕ್ರೋಶಗೊಂಡು ದಾಂಧಲೆ ನಡೆಸಿದ ಘಟನೆ ನಡೆದಿದೆ.
ಹಾವೇರಿಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಗಲಾಟೆ ಯಾರು ಮಾಡಿದರು ಅಂತ ವಿಚಾರಣೆ ನಡೆಯುತ್ತಿದೆ. ಕರ್ನಾಟಕ ಮತ್ತು ನೆರೆಯ ಆಂಧ್ರಪ್ರದೇಶದ ರೈತರು ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡಲು ಬ್ಯಾಡಗಿ ಮಾರುಕಟ್ಟೆಗೆ ಆಗಮಿಸಿದ್ದು, ಮೆಣಸಿನಕಾಯಿ ಬೆಲೆಯಲ್ಲಿ ದಿಢೀರ್ ಕುಸಿತ ಕಂಡು ಆಘಾತಕ್ಕೊಳಗಾಗಿದ್ದಾರೆ.
ಇದರಿಂದ ನಿನ್ನೆ ರಂದು ಘಟನೆಯಲ್ಲಿ 6-7 ಗಾಡಿಗಳನ್ನು ಸುಟ್ಟು ಹಾಕಿದ್ದಾರೆ. ಏಕಾಏಕಿ ದರ ಅಷ್ಟು ಯಾಕೆ ಕುಸಿದಿದೆ ಅಂತ ಗೊತ್ತಿಲ್ಲ. ಇದನ್ನ ತನಿಖೆ ಮಾಡಿ ತಿಳಿಸಿ ಅಂತ ಮುಖ್ಯಮಂತ್ರಿಗಳು ಹೇಳಿದ್ದಾರೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.