Sat. Jun 6th, 2026

ಏಪ್ರಿಲ್ 9ರಂದು ಬಾಗಲಕೋಟೆ, ದಾವಣಗೆರೆ ದಕ್ಷಿಣ ಉಪ ಚುನಾವಣೆ: ವೇತನ ಸಹಿತ ರಜೆ ಘೋಷಣೆ

Share this with Friends

ಬೆಂಗಳೂರು: ರಾಜ್ಯದ 24-ಬಾಗಲಕೋಟೆ ಮತ್ತು 107-ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಮುಂಬರುವ ಏಪ್ರಿಲ್ 9ರ ಗುರುವಾರದಂದು ಉಪ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮತದಾನ ನಡೆಯುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಅರ್ಹ ಮತದಾರರಿಗೆ ಅನುಕೂಲವಾಗುವಂತೆ ಸರ್ಕಾರವು ಒಂದು ದಿನದ ‘ವೇತನ ಸಹಿತ ರಜೆ’ಯನ್ನು ಘೋಷಿಸಿ ಆದೇಶ ಹೊರಡಿಸಿದೆ.

ಯಾರಿಗೆಲ್ಲ ರಜೆ ಅನ್ವಯ?

ಈ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಅನುದಾನಿತ ಸೇರಿದಂತೆ ಎಲ್ಲಾ ಶಾಲಾ-ಕಾಲೇಜುಗಳು, ರಾಷ್ಟ್ರೀಕೃತ ಬ್ಯಾಂಕುಗಳು, ಜೀವ ವಿಮಾ ನಿಗಮ (LIC) ಹಾಗೂ ಹಣಕಾಸು ಸಂಸ್ಥೆಗಳಿಗೆ ರಜೆ ನೀಡಲಾಗಿದೆ.

ಅಲ್ಲದೆ, ಖಾಸಗಿ ವಾಣಿಜ್ಯ ಸಂಸ್ಥೆಗಳು, ಕೈಗಾರಿಕಾ ಘಟಕಗಳು ಹಾಗೂ ಇತರೆ ಉದ್ದಿಮೆಗಳಲ್ಲಿ ಖಾಯಂ ಆಗಿ ಅಥವಾ ದಿನಗೂಲಿ ಆಧಾರದ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ಅರ್ಹ ಮತದಾರರಿಗೂ ಮತ ಚಲಾಯಿಸಲು ವೇತನ ಸಹಿತ ರಜೆ ನೀಡುವಂತೆ ಸರ್ಕಾರ ಸೂಚಿಸಿದೆ.

ಕಾನೂನು ಕ್ರಮ:

Negotiable Instruments Act 1881 ಮತ್ತು Representation of People Act 1951 ರ ಅಡಿಯಲ್ಲಿ ಈ ರಜೆಯನ್ನು ಮಂಜೂರು ಮಾಡಲಾಗಿದೆ. ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಅಡ್ಡಿಯಾಗದಂತೆ ಎಲ್ಲಾ ಸಂಸ್ಥೆಗಳು ಈ ಆದೇಶವನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ಬಾಣದರಂಗಯ್ಯ ಎನ್.ಆರ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 


Share this with Friends

Related Post