Sun. Dec 29th, 2024

ಬಕ್ರೀದ್: ಮುಸ್ಲಿಂ ಬಾಂಧವರಿಂದ ಸಾಮೂಹಿಕ ಪ್ರಾರ್ಥನೆ

Share this with Friends

ಮೈಸೂರು, ಜೂ.17: ಬಕ್ರೀದ್ ಹಬ್ಬದ
ಅಂಗವಾಗಿ ಮುಸ್ಲಿಂ ಬಾಂಧವರು ಮೈಸೂರಿನ ವಿವಿಧೆಡೆ ಮಸೀದಿಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ನಗರದ ತಿಲಕ್ ನಗರದಲ್ಲಿರುವ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ನೆರವೇರಿತು.

ಮೈಸೂರಿನ ವಿವಿಧೆಡೆಗಳಿಂದ ಆಗಮಿಸಿದ್ದ ಸಾವಿರಾರು ಮುಸ್ಲಿಮರು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು.

ಮುಸ್ಲಿಂ ಧರ್ಮಗುರು ಉಸ್ಮಾನ್ ಷರೀಫ್ ಅವರ ದಿವ್ಯ ಸಾನಿಧ್ಯದಲ್ಲಿ ಬಕ್ರೀದ್ ಸಾಮೂಹಿಕ ಪ್ರಾರ್ಥನೆ ನಡೆಯಿತು.

ಪ್ರಾರ್ಥನೆ ಮುಗಿದ ಬಳಿಕ ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.


Share this with Friends

Related Post