ಹಾವೇರಿ,ಏ.15: 2024ರ ಲೋಕಸಭಾ ಚುನಾವಣೆಗೆ ಎರಡನೇ ಹಂತದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಿದ್ದು ಇಂದು ಅನೇಕರು ಸಲ್ಲಿಸಿದರು
ಇಂದು ನಾಮಪತ್ರ ಸಲ್ಲಿಸಿದವರಲ್ಲಿ ಬಿಜೆಪಿಯ ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಜಗದೀಶ್ ಶೆಟ್ಟರ್ ಪ್ರಮುಖರು.
ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಇಂದು ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾಜಿ ಸಚಿವ ಬಿ.ಸಿ.ಪಾಟೀಲ್, ಶಾಸಕ ಡಾ. ಚಂದ್ರು ಲಮಾಣಿ, ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಹಾಗೂ ಬಿಜೆಪಿ ಮುಖಂಡ ಶಂಕರಣ್ಣ ಹಾಜರಿದ್ದರು.
ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ನಾಮಪತ್ರ ಸಲ್ಲಿಸಿದರು.
ಶೆಟ್ಟರ್ ನಾಮಪತ್ರ ಸಲ್ಲಿಕೆ ವೇಳೆ ಮಾಜಿ ಸಂಸದೆ ಮಂಗಳ ಅಂಗಡಿ, ಶಾಸಕ ರಮೇಶ್ ಜಾರಕಿಹೊಳಿ, ಮತ್ತಿತರರು ಸಾತ್ ನೀಡಿದರು.