ಬೆಂಗಳೂರು, ಮೇ.17: ಬೆಂಗಳೂರಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ ಕರಡಿಹಳ್ಳಿ ಗ್ರಾಮದ ಹರ್ಷಿತ (21)ಆತ್ಮಹತ್ಯೆ ಮಾಡಿಕೊಂಡಿರುವ ಇಂಜಿನಿಯರಿಂಗ್ ವಿದ್ಯಾರ್ಥಿನಿ.
ಹೀಲಲಗಿ ಸಮೀಪ ಇರುವ ಬಿ ಇ ಸಿ ಟಿ ಖಾಸಗಿ ಕಾಲೇಜಿನಲ್ಲಿ ಹರ್ಷಿತ ಬಿಇ ಪ್ರಥಮ ವರ್ಷ ವ್ಯಾಸಂಗ ಮಾಡುತ್ತಿದ್ದಳು,ಇದೇ ಕಾಲೇಜಿನ ಆವರಣದಲ್ಲಿರುವ
ವಿದ್ಯಾರ್ಥಿ ನಿಲಯದಲ್ಲಿ ಈಕೆ ತನ್ನ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಇದೇ ಕೊಠಡಿಯಲ್ಲಿದ್ದ ಮತ್ತೊಬ್ಬ ವಿದ್ಯಾರ್ಥಿನಿ ಊರಿಗೆ ಹೋಗಿದ್ದು ಈಕೆ ಒಬ್ಬಳೇ ಇದ್ದಳು, ಬೆಳಗ್ಗೆ ಸ್ನೇಹಿತರು ಹರ್ಷಿತ ಕೊಠಡಿ ಇನ್ನು ತೆಗೆಯದ ಕಾರಣ ವಿದ್ಯಾರ್ಥಿ ನಿಲಯದ ಸಿಬ್ಬಂದಿಗೆ ತಿಳಿಸಿದ್ದಾರೆ.
ಸಿಬ್ಬಂದಿ ಬಾಗಿಲು ತೆರೆದು ನೋಡಿದಾಗ ಹರ್ಷಿತಾ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಸೂರ್ಯ ಸಿಟಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.