Fri. Nov 1st, 2024

ಎಲ್‌ಕೆ ಅಡ್ವಾಣಿ ಅವರಿಗೆ ಇಂದು ಭಾರತ ರತ್ನ ಪ್ರದಾನ

Share this with Friends

ನವದೆಹಲಿ,ಮಾ.31: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬಿಜೆಪಿ ಹಿರಿಯ ನಾಯಕ, ಎಲ್‌.ಕೆ.ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಗೌರವ ಭಾರತ ರತ್ನ ಪ್ರಶಸ್ತಿಯನ್ನು ಅವರ ನಿವಾಸದಲ್ಲೇ ಪ್ರದಾನ ಮಾಡಿದರು.

ಈ ವೇಳೆ ಪ್ರಧಾನಿ ನರೇಂದ್ರ ಮೋದಿ, ಉಪರಾಷ್ಟ್ರಪತಿ ಜಗದೀಪ್ ಧನಕರ್, ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಉಪಸ್ಥಿತರಿದ್ದರು.

ಶನಿವಾರ ರಾಷ್ಟ್ರಪತಿ ಭವನದಲ್ಲಿ ಮಾಜಿ ಪ್ರಧಾನಿಗಳಾದ ಚೌಧರಿ ಚರಣ್‌ ಸಿಂಗ್‌, ಪಿ.ವಿ. ನರಸಿಂಹ ರಾವ್‌, ಕೃಷಿ ವಿಜ್ಞಾನಿ ಎಂ.ಎಸ್‌. ಸ್ವಾಮಿನಾಥನ್‌ ಮತ್ತು ಬಿಹಾರದ ಮಾಜಿ ಮುಖ್ಯಮಂತ್ರಿ ಕರ್ಪೂರಿ ಠಾಕೂರ್‌ ಅವರಿಗೆ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿತ್ತು.

ಅನಾರೋಗ್ಯದ ಕಾರಣ ಶನಿವಾರ ನಡೆದ ಸಮಾರಂಭದಲ್ಲಿ ಭಾರತ ರತ್ನ ಪ್ರಶಸ್ತಿ ಸ್ವೀಕರಿಸಲು ಅಡ್ವಾಣಿ ಅವರು ಆಗಮಿಸಿರಲಿಲ್ಲ.

ಬಿಜೆಪಿ ಹಿರಿಯ ನಾಯಕ ಲಾಲ್‌ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಈ ವರ್ಷದ ಫೆಬ್ರವರಿಯಲ್ಲಿ ಪ್ರಕಟಿಸಿದ್ದರು.

ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಬಹಳಷ್ಟಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶ ಸೇವೆ ಮಾಡಿದ್ದಾರೆ. ಅವರು ನಮ್ಮ ಗೃಹ ಮಂತ್ರಿ ಮತ್ತು ವಾರ್ತಾ ಮತ್ತು ಪ್ರಸಾರ ಸಚಿವರಾಗಿಯೂ ಗುರುತಿಸಿಕೊಂಡರು.

ಅವರ ಸಂಸದೀಯ ಮಧ್ಯಸ್ಥಿಕೆಗಳು ಯಾವಾಗಲೂ ಆದರ್ಶಪ್ರಾಯವಾಗಿವೆ, ಶ್ರೀಮಂತ ಒಳನೋಟಗಳಿಂದ ತುಂಬಿವೆ. ಸಾರ್ವಜನಿಕ ಜೀವನದಲ್ಲಿ ಅಡ್ವಾಣಿ ದಶಕಗಳ ಸುದೀರ್ಘ ಸೇವೆಯು ಪಾರದರ್ಶಕತೆ ಮತ್ತು ಸಮಗ್ರತೆಗೆ ಅಚಲವಾದ ಬದ್ಧತೆಯಿಂದ ಗುರುತಿಸಲ್ಪಟ್ಟಿದೆ.

ರಾಷ್ಟ್ರೀಯ ಏಕತೆ ಮತ್ತು ಸಾಂಸ್ಕೃತಿಕ ಪುನರುತ್ಥಾನದ ಕಡೆಗೆ ಅಪ್ರತಿಮ ಪ್ರಯತ್ನಗಳನ್ನು ಅಡ್ವಾಣಿ ಮಾಡಿದ್ದಾರೆ. ಅವರಿಗೆ ಭಾರತರತ್ನ ಪ್ರಶಸ್ತಿಯನ್ನು ಕೊಡುವುದು ನನ್ನ ಪಾಲಿನ ಅತ್ಯಂತ ಭಾವನಾತ್ಮಕ ಕ್ಷಣ ಎಂದು ಮೋದಿ ಎಕ್ಸ್ ನಲ್ಲಿ ಬರೆದಿದ್ದರು.


Share this with Friends

Related Post