ಬೆಂಗಳೂರು, ಫೆ.26: ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಯುವ ಸಮೃದ್ಧಿ ಸಮ್ಮೇಳನ ಮತ್ತು ಉದ್ಯೋಗ ಮೇಳವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.
ಈ ವೇಳೆ ಮಾತನಾಡಿದ ಸಿಎಂ,
ನಿರುದ್ಯೋಗಿ ಯುವಕರಿಗೆ ಇವನಿಗೆ ನೀಡುವ ಜತೆಗೆ ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅತ್ಯಗತ್ಯ ತರಬೇತಿಗಳನ್ನು ನೀಡಲಾಗುವುದು ಎಂದು ಘೋಷಿಸಿದರು.
ನಿರುದ್ಯೋಗ ನಮ್ಮ ದೇಶದ ಅತಿ ಪ್ರಮುಖ ಸಮಸ್ಯೆಯಾಗಿದೆ, ಕಳೆದ ಹತ್ತು ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ ಅತಿ ಹೆಚ್ಚಾಗಿದೆ, 2014ರಲ್ಲಿ ಪ್ರಧಾನಿ ಮೋದಿಯವರು ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಭರವಸೆ ನೀಡಿ ಯುವಜನರ ಮತ ಗಳಿಸಿದರು.
ಆದರೆ ಈ ಹತ್ತು ವರ್ಷದಲ್ಲಿ 20 ಕೋಟಿ ಉದ್ಯೋಗ ಸೃಷ್ಟಿಸಬೇಕಿದ್ದ ಪ್ರಧಾನಿಯವರು ಹೇಳಿದ್ದೆ ಒಂದು ಮಾಡಿದ್ದೆ ಒಂದು ಇರುವ ಉದ್ಯೋಗಗಳನ್ನು ಅವರು ಕಿತ್ತುಕೊಂಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು
ಹೊಸ ಉದ್ಯೋಗ ಸೃಷ್ಟಿ ಮತ್ತು ತರಬೇತಿ ನೀಡಲು ಈಗಿರುವ ಜಿಟಿಡಿಸಿ ಗಳ ಜೊತೆಗೆ ಮತ್ತಷ್ಟು ಜಿಟಿಡಿಸಿ ಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಇದೇ ವೇಳೆ ಸಿಎಂ ಘೋಷಿಸಿದರು.
ಕಾರ್ಯಕ್ರಮ ದಲ್ಲಿ ಸಚಿವರುಗಳಾದ ಶರಣಪ್ರಕಾಶ್ ಪಾಟೀಲ್, ಪ್ರಿಯಾಂಕ್ ಖರ್ಗೆ, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಕೌಶಲ್ಯ ಅಭಿವೃದ್ಧಿ ಇಲಾಖೆಯ ಉನ್ನತ ಅಧಿಕಾರಿಗಳು, ಉದ್ಯಮಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.