Mon. Dec 23rd, 2024

ದೇಶ ಒಡೆಯುವ ಹೇಳಿಕೆ ನೀಡುವವರನ್ನು ಗುಂಡಿಕ್ಕಿ ಕೊಲ್ಲಬೇಕು : ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

K. S. Eshwarappa
Share this with Friends

ದಾವಣಗೆರೆ: ದೇಶ ವಿಭಜನೆ ಬಗ್ಗೆ ಮಾತನಾಡುವ ಸಂಸದ ಡಿ. ಕೆ. ಸುರೇಶ್, ಶಾಸಕ ವಿನಯ್ ಕುಲಕರ್ಣಿ ಅವರು ದೇಶದ್ರೋಹಿಗಳು. ಇಂಥವರನ್ನು ಗುಂಡಿಕ್ಕಿ ಕೊಲ್ಲುವ ಕಾನೂನನ್ನು ಪ್ರಧಾನಿ ನರೇಂದ್ರ ಮೋದಿ ಅವರು ಜಾರಿಗೊಳಿಸಬೇಕು ಎಂದು ಮಾಜಿ ಡಿಸಿಎಂ ಕೆ. ಎಸ್. ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದರು.

ದಾವಣಗೆರೆಯಲ್ಲಿ ನಡೆದ ಪಕ್ಷದ ಸಭೆಯಲ್ಲಿ ಆಕ್ರೋಶಭರಿತರಾಗಿ ಮಾತನಾಡಿದ ಅವರು, ಜವಾಬ್ಧಾರಿಯುತ ಸಂಸದ ಸ್ಥಾನದಲ್ಲಿದ್ದು ಡಿ.ಕೆ. ಸುರೇಶ್, ಸಚಿವರಾದ ವಿನಯ್ ಕುಲಕರ್ಣಿ ಇಬ್ಬರೂ ದೇಶವನ್ನು ಇಬ್ಭಾಗ ಮಾಡಬೇಕು ಎಂಬ ಮಾತನಾಡಿರುವುದು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ. ಇಂತಹ ಹೇಳಿಕೆಗಳನ್ನು ನೀಡುವುದು ರಾಷ್ಟ್ರದ್ರೋಹವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶ ಒಡೆಯುವ ಹೇಳಿಕೆ ನೀಡುವ ಇವರುಗಳದ್ದು ಮೊಹಮ್ಮದ್ ಅಲಿ, ಜಿನ್ನಾ ಮನಃಸ್ಥಿತಿಯಾಗಿದೆ. ದೇಶವನ್ನು ಒಗ್ಗೂಡಿಸುವ ಕೆಲಸವಾಗಬೇಕು. ಒಡೆಯುವ ಹೇಳಿಕೆ ನೀಡಿರುವುದು ಅಕ್ಷಮ್ಯ ಅಪರಾಧ. ಇಂತಹವರನ್ನು ಗುಂಡಿಟ್ಟು ಕೊಲ್ಲಬೇಕು, ಇದಕ್ಕಾಗಿ ಇಂತಹ ಕಾನೂನು ತರಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ ಕೇಳಿಕೊಳ್ಳುತ್ತೇನೆ ಎಂದರು.

ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಈಶ್ವರಪ್ಪ ನೀಡಿರುವ ಹೇಳಿಕೆ ವಿರುದ್ಧ ಕ್ರಮ ಕೈಗೊಳ್ಳಲು ಅವಕಾಶವಿದೆ ಎಂದು ಗೃಹಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ. ಈಶ್ವರಪ್ಪ ನೀಡಿರುವ ವಿವಾದಾತ್ಮಕ ಹೇಳಿಕೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಅವರು, ಈ ಹೇಳಿಕೆ ಹೇಳಿರುವ ಈಶ್ವರಪ್ಪ ವಿರುದ್ಧ ಕ್ರಮ ಕೈಗೊಳ್ಳಲು ಕಾನೂನಿನಲ್ಲಿ ಅವಕಾಶವಿದೆ. ಈ ಕುರಿತಂತೆ ಪೊಲೀಸ್ ಠಾಣೆಯಲ್ಲಿ ಯಾರಾದರೂ ದೂರು ದಾಖಲಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

ಡಿ.ಕೆ. ಸುರೇಶ್ ಪ್ರತಿಕ್ರಿಯೆ ಏನು?
ತಮ್ಮ ವಿರುದ್ಧ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಲು ಬಿ.ಕೆ. ಸುರೇಶ್ ನಿರಾಕರಿಸಿದ್ದಾರೆ. ಈಶ್ವರಪ್ಪ ಹೇಳಿಕೆಗೆ ಇಂದು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಬದಲಾಗಿ ನಾಳೆ ನನ್ನ ಪ್ರತಿಕ್ರಿಯೆಯನ್ನು ನೀಡುತ್ತೇನೆ ಎಂದಿರುವುದು ಕುತೂಹಲಕ್ಕೆ ಕಾರಣವಾಗಿದೆ.

ರಾಜ್ಯದಲ್ಲಿ ಹೆಚ್ಚುತ್ತಿದೆ ಬಿಸಿಲಿನ ತಾಪ, ಎಚ್ಚರಿಕೆಯಿಂದಿರಲು ಮುನ್ಸೂಚನೆ


Share this with Friends

Related Post