ನವದೆಹಲಿ,ಜು.26: ಕರ್ನಾಟಕದಲ್ಲಿ ದಲಿತರ ಹಣವನ್ನು ಕಾಂಗ್ರೆಸ್ ಪಕ್ಷ ಲೂಟಿ ಮಾಡುತ್ತಿದೆ ಎಂದು ಆರೋಪಿಸಿ ಬಿಜೆಪಿ ಕರ್ನಾಟಕದ ಸಂಸದರು ಪ್ರತಿಭಟನೆ ನಡೆಸಿದರು.
ಸಂಸತ್ ಭವನದ ಆವರಣದಲ್ಲಿ ಪ್ರತಿಭಟನೆ ನಡೆಸಿ, ರಾಹುಲ್ ಗಾಂಧಿ ಎಲ್ಲಿದ್ದಾರೆ ಕರ್ನಾಟಕದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ರಾಹುಲ್ ಗಾಂಧಿ ಎಲ್ಲಿದ್ದಾರೆ ಎಂದು ಹಿಂದಿ ಭಾಷೆಯಲ್ಲಿ ಘೋಷಣೆಗಳನ್ನು ಕೂಗಿದರು.
ಮುಖ್ಯ ಮಂತ್ರಿ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ ಬಂದಿದೆ.ಹಠಾವೋ, ಹಠಾವೋ ಭ್ರಷ್ಟ ಮುಖ್ಯಮಂತ್ರಿ ಕೋ ಹಠಾವೋ ಎಂಬ ಘೋಷಣೆ ಕೂಗಿದರು.
ಸಂಸದರಾದ ಜಗದೀಶ ಶೆಟ್ಟರ್,ಗೋವಿಂದ ಕಾರಜೋಳ ಮಾತನಾಡಿ, ಮುಖ್ಯಮಂತ್ರಿಗಳು ಮೂಡಾ ಹಗರಣ ಕುರಿತು ಸದನದಲ್ಲಿ ಮಾತನಾಡಲು ಅವಕಾಶ ಕೊಟ್ಟಿಲ್ಲ, ಇದು ಹಗರಣ ಮುಚ್ಚಿ ಹಾಕುವ ಕೆಲಸ, ನಮ್ಮ ಶಾಸಕರು ಅಹೋರಾತ್ರಿ ಧರಣಿ ಮಾಡಿದ್ದಾರೆ, ನಾವೂ ಇಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.
ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಹಗರಣ ನಡೆದಿದೆ. ನಕಲಿ ಖಾತೆಗಳಿಗೆ ಹಣ ಹೋಗಿದೆ. ಹಣಕಾಸು ಇಲಾಖೆ ನಿರ್ವಹಿಸುವ ಮುಖ್ಯಮಂತ್ರಿಗಳೇ ಇದಕ್ಕೆ ಜವಾಬ್ದಾರರು,ಸಿಎಂ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.
ಪಿ.ಸಿ.ಮೋಹನ್ ಅವರು ಮಾತನಾಡಿ, ವಾಲ್ಮೀಕಿ ನಿಗಮದ ಹಗರಣ- ಮೂಡಾ ಹಗರಣದಲ್ಲಿ ನೈತಿಕ ಹೊಣೆಯನ್ನು ಸಿಎಂ ಸಿದ್ದರಾಮಯ್ಯ ಹೊರಬೇಕು ಎಂದು ಆಗ್ರಹಿಸಿದರು.