Sat. Dec 28th, 2024

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Share this with Friends

ಬೆಂಗಳೂರು,ಜೂ.17: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿರುವ ರಾಜ್ಯ ಸರ್ಕಾರದ ನಡೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸಿತು.

ಸೋಮವಾರ ಬೆಂಗಳೂರು, ಮಂಗಳೂರು, ಮಂಡ್ಯ ಸೇರಿ ರಾಜ್ಯದ್ಯಂತ ಸರ್ಕಾರದ ವಿರುದ್ದ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಶಾಸಕರಾದ ಭೈರತಿ ಬಸವರಾಜ್ ಎಂಎಲ್ ಸಿ ರವಿ ಕುಮಾರ್ ಸಿ.ಟಿ ರವಿ ಸೇರಿದಂತೆ ಅನೇಕ ನಾಯಕರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಮಾತನಾಡಿದ ವಿಜಯೇಂದ್ರ, ರಾಜ್ಯ ಸರ್ಕಾರದ ಜನವಿರೋಧಿ ನಿಲುವಿನ ವಿರುದ್ಧ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಎಲ್ಲಾ ಕ್ಷೇತ್ರಗಳ ಮೇಲೆ ನೇರ ಪರಿಣಾಮ ಬೀರಲಿದೆ. ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಸರ್ಕಾರ ದೊಡ್ಡ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಇದರಿಂದ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನನೆಗುದಿಗೆ ಬಿದ್ದಿವೆ ಎಂದು ದೂರಿದರು.

ಆರ್‌.ಅಶೋಕ್ ಮಾತನಾಡಿ,
ಮುಖ್ಯಮಂತ್ರಿ ಸಿದ್ದರಾಮಯ್ಯ ನುಂಗಣ್ಣನಂತೆ ಎಲ್ಲವನ್ನೂ ನುಂಗುತ್ತಿದ್ದಾರೆ. ಅದರ ಜೊತೆಗೆ ತೈಲ ದರ ಏರಿಕೆ ಮಾಡಿ ಜನರನ್ನು ಲೂಟಿ ಮಾಡುತ್ತಿದ್ದಾರೆ. ಜನರು ದಂಗೆ ಎದ್ದು ಸರ್ಕಾರವನ್ನು ಕಿತ್ತುಹಾಕಬೇಕಿದೆ ಎಂದು ಕರೆ ನೀಡಿದರು.


Share this with Friends

Related Post