Mon. Dec 23rd, 2024

ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಪ್ರತಿಭಟನೆ

Share this with Friends

ಮೈಸೂರು: ಮುಖ್ಯ ಮಂತ್ರಿ‌ ಸಿದ್ದರಾಮಯ್ಯ ಅವರ‌ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಮೈಸೂರಿನ ಬಿಜೆಪಿ ಕಚೇರಿ ಬಳಿ ನೂರಾರು ಕಾರ್ಯಕರ್ತರು ಸೇರಿ ಪ್ರತಿಭಟನೆ ನಡೆಸಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ‌ವಿರುದ್ಧ ಘೋಷಣೆ ಕೂಗಿದರು.

ಹೈಕೋರ್ಟ್ ಹಾಗೂ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಸಿದ್ದರಾಮಯ್ಯ ವಿರುದ್ದ ತೀರ್ಪು ‌ಬಂದಿದೆ.ಜತೆಗೆ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಿಸುವಂತೆ ಆದೇಶಿಸಲಾಗಿದೆ.ಆದರೂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡದೆ ಬಂಡತನ ತೋರುತ್ತಿದ್ದಾರೆ ಎಂದು ಕಾರ್ಯಕರ್ತರು ಕಿಡಿಕಾರಿದರು.

ಈ‌ ವೇಳೆ ಸಿದ್ದರಾಮಯ್ಯ ಅವರ ಚಿತ್ರಗಳನ್ನು ಪ್ರದರ್ಶಿಸಿ ಆಕ್ರೋಶ‌ ವ್ಯಕ್ತಪಡಿಸಿ.ರಾಜೀನಾಮೆ ನೀಡಲೇಬೇಕೆಂದು‌ ಒತ್ತಾಯಿಸಿದರು.

ಈ‌ ವೇಳೆ ‌ಪೊಲೀಸರು ಬಿಜೆಪಿಯ ಹಲವಾರು ಕಾರ್ಯಕರ್ತರನ್ನು ವಶಕ್ಕೆ ಪಡೆದರು.


Share this with Friends

Related Post