ಬೆಂಗಳೂರು,ಫೆ.12: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ರೈತರಿಗಾಗಿ ಸಾಕಷ್ಟು ಯೋಜನೆಗಳನ್ನು ಹಮ್ಮಿಕೊಂಡಿದ್ದು ಅವುಗಳನ್ನು ಪ್ರತಿ ಹಳ್ಳಿಯ ಮನೆಗೂ ತಪ್ಪಿಸುವ ಕೆಲಸವನ್ನು ಮಾಡೋಣ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಖಜಾಂಚಿ ಹರೀಶ್ ಬಾಬು ಕರೆ ನೀಡಿದರು.
ಬಿಜೆಪಿಯಿಂದ ದೇಶದಾದ್ಯಂತ ಗ್ರಾಮ ಪರಿಕ್ರಮ ಯಾತ್ರೆ ಹಮ್ಮಿಕೊಳ್ಳಲಾಗಿದ್ದು, ಇಂದು ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮಕ್ಕೆ ಹರೀಶ್ ಬಾಬು ಚಾಲನೆ ನೀಡಿ ಮಾತನಾಡಿದರು.
ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕೃಷಿಯಲ್ಲಿ ಸಾಕಷ್ಟು ಬದಲಾವಣೆ ಮಾಡಿದ್ದಾರೆ, ರೈತರಿಗೆ ರಸಗೊಬ್ಬರ, ಹೈನುಗಾರಿಕೆಗೆ ಉತ್ತೇಜನ, ರೈತರು ಬೆಳೆದ ಬೆಳೆಗೆ ಬೆಂಬಲ ಬೆಲೆ ಕೊಡುವುದು ಸೇರಿದಂತೆ ಹಲವು ರೀತಿಯಲ್ಲಿ ಯೋಜನೆ ಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.
ನೈಸರ್ಗಿಕ ಕೃಷಿಗೆ ಒತ್ತು ನೀಡುವ ಮೂಲಕ ಸಾಕಷ್ಟು ಯೋಜನೆಗಳನ್ನು ಕೇಂದ್ರ ಸರ್ಕಾರ ಹಮ್ಮಿಕೊಂಡಿದೆ ಈ ಯೋಜನೆಗಳನ್ನು ನಾವು ಪ್ರತಿ ಹಳ್ಳಿಯ ಮನೆಮನೆಗೂ ತಲುಪಿಸುವ ಕೆಲಸವನ್ನು ಮಾಡಬೇಕಿದೆ ಎಂದು ಹರೀಶ್ ಬಾಬು ಹೇಳಿದರು.
ಮೋದಿಯವರ ಸರ್ಕಾರ ಕೊಟ್ಟಿರುವ ಸೌಲಭ್ಯಗಳನ್ನು ಪ್ರತಿ ಮನೆಗೂ ತಲುಪಿಸಬೇಕು ಎಂಬ ಕಾರಣಕ್ಕಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ.
ಪಿಎಂ ಕಿಸಾನ್ ಸಮ್ಮಾನ್ ಯೋಜನೆ ಮೂಲಕ ವಾರ್ಷಿಕ 6,000 ಫಲಾನುಭವಿಗಳಿಗೆ 11.8ಕೋಟಿ ಫಲಾನುಭವಿಗಳಿಗೆ ನೀಡಲಾಗಿದೆ ಅದೇ ರೀತಿ ಫಸಲ್ ಭೀಮಾ ಯೋಜನೆ, ಪಿಎಂ ಸಮ್ಮಾನ್ ಯೋಜನೆ, ಕೃಷಿ ಸಿಂಚನ್ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ರೂಪಿಸಲಾಗಿದೆ ಇವುಗಳನ್ನು ಪ್ರತಿ ಮನೆಗೂ ತಲುಪಿಸುವ ಕೆಲಸ ಮಾಡೋಣ ಎಂದು ಹರಿಶ್ ಬಾಬು ತಿಳಿಸಿದರು. ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಅಶೋಕ್ ಸೇರಿದಂತೆ ಹಲವಾರು ಬಿಜೆಪಿ ಮುಂಡರು ಹಾಜರಿದ್ದರು.
ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ಬಿಜೆಪಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ದೇಶದ ಎಲ್ಲಾ ಸಂಘಟನಾತ್ಮಕ ಜಿಲ್ಲೆಗಳಲ್ಲಿ ಎಲ್‌ಇಡಿ ಮೂಲಕ ಕಾರ್ಯಕ್ರಮ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು.