ಮೈಸೂರು, ಜೂ.26: ರಾಜ್ಯ ಸರ್ಕಾರ ನಂದಿನಿ ಹಾಲಿನ ದರ ಎರಡು ರೂ ಹೆಚ್ಚಿಸಿರುವುದನ್ನು ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷ ಜೋಗಿ ಮಂಜು ಖಂಡಿಸಿದ್ದಾರೆ.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕಳೆದ ವಾರಷ್ಟೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿ,ಈಗ ಹಾಲಿನ ದರವನ್ನು ಮತ್ತೆ ಹೆಚ್ಚಳ ಮಾಡುವ ಮೂಲಕ ಬಡ,ಮಧ್ಯಮ ವರ್ಗದ ಜನರ ವಿರೋಧಿ ಸರ್ಕಾರ ಎಂದು ಸಾಬೀತು ಪಡಿಸಿದೆ ಎಂದು ಟೀಕಿಸಿದ್ದಾರೆ.
ರಾಜ್ಯ ಸರ್ಕಾರ ವಿಧಾನಸಭಾ ಚುನಾವಣೆಗೂ ಮುನ್ನ ಜನಸಾಮಾನ್ಯರನ್ನು ದಾರಿ ತಪ್ಪಿಸಲು ಐದು ಭಾಗ್ಯಗಳನ್ನು ಕೊಡುವುದಾಗಿ ಆಶ್ವಾಸನೆ ನೀಡಿದ್ದರ ಫಲವಾಗಿ ಈಗ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದೆ.
ಬಿಟ್ಟಿ ಭಾಗ್ಯಗಳನ್ನು ಕೊಡುವ ಮೂಲಕ ಜನಸಾಮಾನ್ಯರ ಮೂಗಿಗೆ ತುಪ್ಪ ಸವರಿದರೆ ಇನ್ನೊಂದು ಕಡೆ ಅದೇ ಜನಸಾಮಾನ್ಯರ ರಕ್ತ ಹೀರುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ.
ಕೂಡಲೇ ರಾಜ್ಯಪಾಲರು ಮಧ್ಯೆ ಪ್ರವೇಶಿಸಿ ಈ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು ಮತ್ತು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟು ಜನಸಾಮಾನ್ಯರಿಗೆ ನ್ಯಾಯ ಕೊಡಿಸಬೇಕು ಎಂದು ಜೋಗಿ ಮಂಜು ಒತ್ತಾಯಿಸಿದ್ದಾರೆ.