Fri. Nov 1st, 2024

ಮಹಿಳೆಯರ ಸಬಲೀಕರಣಕ್ಕೆ ಬಿಜೆಪಿ ಆದ್ಯತೆ: ರೇಣುಕ ರಾಜ್

Share this with Friends

ಮೈಸೂರು, ಮಾ.20: ದೇಶದ ಅಖಂಡತೆ ಮತ್ತು ಅಭಿವೃದ್ಧಿಗೆ ಬಿಜೆಪಿ ಒತ್ತು ನೀಡುತ್ತದೆ ಕಾಂಗ್ರೆಸ್ ನಂತಲ್ಲಾ ಎಂದು ಬಿಜೆಪಿ ನಗರ ಮಹಿಳಾ ಮೋರ್ಚಾ ಅಧ್ಯಕ್ಷೆ ರೇಣುಕ ರಾಜ್ ಹೇಳಿದರು.

ಕಾಂಗ್ರೆಸ್‌ ಪಕ್ಷದಂತೆ ಪುಕ್ಕಟ್ಟೆ ಭಾಗ್ಯಗಳನ್ನು ನೀಡಿ, ಆರ್ಥಿಕ ವ್ಯವಸ್ಥೆಯನ್ನು ಹಾಳು ಮಾಡುವುದಕ್ಕೆ ಬಿಜೆಪಿ ಹೋಗುವುದಿಲ್ಲ ಎಂದು ಅವರು ತಿಳಿಸಿದರು.

ಕುವೆಂಪು ನಗರದಲ್ಲಿರುವ ಮೈಸೂರು ನಗರ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಬಂದಂತಮ್ಮ ಮತ್ತು ಶ್ರೀ ಕಾಳಮ್ಮ ದೇವಸ್ಥಾನದಲ್ಲಿ ನಾರಿ ಶಕ್ತಿ ಕಾರ್ಯಕ್ರಮದಲ್ಲಿ ಶಕ್ತಿ ದೇವಿ ಪೂಜೆ ಮಾಡಿ ಅವರು ಮಾತನಾಡಿದರು.

ಬಿಜೆಪಿಯು ಮಹಿಳೆಯರ ಸಬಲೀಕರಣಕ್ಕೆ ಹೆಚ್ಚು ಆದ್ಯತೆ ನೀಡಿದೆ. ಚುನಾವಣೆಯಲ್ಲಿ ಸಾಮಾನ್ಯ ಮಹಿಳೆಯರಿಗೂ ಸ್ಪರ್ಧಿಸುವ ಅವಕಾಶ ಕಲ್ಪಿಸಿದೆ. ಪಕ್ಷದ ಹುದ್ದೆಗಳಲ್ಲಿ ಮಹಿಳೆಯರಿಗೆ ಆದ್ಯತೆ ನೀಡಿದೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ಸುಳ್ಳು ಭರವಸೆಗಳಿಗೆ ಜನರು ಮಾರು ಹೋಗದಂತೆ ಜಾಗೃತಿ ಮೂಡಿಸಬೇಕಿದೆ ಎಂದು ಹೇಳಿದರು.

ಮೈಸೂರು ಕೊಡಗು ಲೋಕಸಭಾ ಕ್ಷೇತ್ರಕ್ಕೆ ನಮ್ಮ ರಾಜರಾದ ಯದುವೀರ ಕೃಷ್ಣ ದತ್ತ ಒಡೆಯರು ಅವರಿಗೆ ಸ್ಪರ್ಧಿಸಲು ಅವಕಾಶ ಸಿಕ್ಕಿರುವುದು ನಮೆಗಲ್ಲ ಸಂತಸವಾಗಿದೆ. ಈ ಬಾರಿ ಲೋಕಸಭಾ ಚುನಾವಣೆಯಲ್ಲಿ 2 ಲಕ್ಷಕ್ಕೂ ಅಧಿಕ ಮತಗಳಿಂದ ಗೆಲ್ಲುವಂತೆ ನಾವೆಲ್ಲರೂ ಶ್ರಮಿಸಬೇಕು ಎಂದು ರೇಣುಕಾ ರಾಜ್ ಕರೆ ನೀಡಿದರು.

ಮಾಜಿ ಉಪ ಮೇಯರ್ ಡಾಕ್ಟರ್ ರೂಪ , ಪಾಲಿಕೆ ಮಾಜಿ ಸದಸ್ಯರಾದ ಲಕ್ಷ್ಮಿ ಕಿರಣ್ ಗೌಡ,ನಗರ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಕಲಾ, ಮಮತಾ ಶೆಟ್ಟಿ, ಚಾಮುಂಡೇಶ್ವರಿ ನಗರ ಮಂಡಲ ಅಧ್ಯಕ್ಷೆ ಲಕ್ಷ್ಮಿ, ಕೃಷ್ಣರಾಜ ಕ್ಷೇತ್ರದ ಅಧ್ಯಕ್ಷರಾದ ಸರ್ವ ಮಂಗಳ, ಚಾಮುಂಡೇಶ್ವರಿ ಗ್ರಾಮಾಂತರ ಮಮತಾ ಗೌಡ, ನರಸಿಂಹರಾಜ ಕ್ಷೇತ್ರದ ಮಾಲಿನಿ ಪಾಲಾಕ್ಷ, ಹಾಗೂ ನೂರಾರು ಬಿಜೆಪಿ ಮಹಿಳಾ ಕಾರ್ಯಕರ್ತರು ಹಾಜರಿದ್ದರು.


Share this with Friends

Related Post