ಇಸ್ಲಾಮಾಬಾದ್: ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟಗೊಂಡಿದ್ದು,26 ಮಂದಿ ದುರ್ಮರಣ ಅಪ್ಪಿದ್ದಾರೆ.
ಶನಿವಾರ ನೈಋತ್ಯ ಪಾಕಿಸ್ತಾನದ ಕ್ವೆಟ್ಟಾ ರೈಲು ನಿಲ್ದಾಣದ ಬುಕ್ಕಿಂಗ್ ಕೌಂಟರ್ ಬಳಿ ಎರಡು ಪ್ರಭಲ ಬಾಂಬ್ ಗಳು ಸ್ಫೋಟಗೊಂಡಿದೆ.
ಈ ಬಗ್ಗೆ ಪೊಲೀಸ್ ಕಾರ್ಯಾಚರಣೆಯ ಹಿರಿಯ ಅಧೀಕ್ಷಕ ಮುಹಮ್ಮದ್ ಬಲೋಚ್ ಮಾತನಾಡಿ, ಪೇಶಾವರಕ್ಕೆ ಹೋಗುವ ಎಕ್ಸ್‌ಪ್ರೆಸ್ ರೈಲು ನಿಲ್ದಾಣದಿಂದ ಹೊರಡಲು ಸಿದ್ಧವಾಗಿತ್ತು. ಜೊತೆಗೆ ಪ್ಯಾಸೆಂಜರ್ ರೈಲಿಗಾಗಿ ಹಲವು ಜನ ಕಾಯುತ್ತಿದ್ದರು,ಹಾಗಾಗಿ ನಿಲ್ದಾಣ ಭಾರೀ ಜನಸಂದಣಿಯಿಂದ ಕೂಡಿತ್ತು, ಈ ವೇಳೆ ಒಂದರ ಹಿಂದೆ ಒಂದರಂತೆ ಎರಡು ಬಾಂಬ್ ಸ್ಫೋಟಗೊಂಡಿವೆ ಎಂದು ಮಾಹಿತಿ ನೀಡಿದ್ದಾರೆ.
ಮೊದಲ ಬಾಂಬ್ ಸ್ಫೋಟಗೊಂಡಾಗ 4 ಜನ ಹಾಗೂ ಎರಡನೇ ಬಾಂಬ್ ಸ್ಫೋಟಗೊಂಡಾಗ 15 ರಿಂದ 26 ಜನರು ಸಾವನ್ನಪ್ಪಿರಬಹುದು ಎಂದು ಊಹಿಸಲಾಗಿದೆ ಸ್ಫೋಟದಲ್ಲಿ 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡಿತು.