Tue. Dec 24th, 2024

ಬಿಎಸ್​​​​​ಪಿ ರಾಜ್ಯಾಧ್ಯಕ್ಷ ಕೆ.ಆರ್ಮ್ ಸ್ಟ್ರಾಂಗ್ ಹತ್ಯೆ

Share this with Friends

ಚನ್ನೈ,ಜು.6: ತಮಿಳುನಾಡಿನ ಬಿಎಸ್​​​​​ಪಿ ರಾಜ್ಯಾಧ್ಯಕ್ಷ ಕೆ.ಆರ್ಮ್ ಸ್ಟ್ರಾಂಗ್ ಅವರನ್ನು ದುಷ್ಕರ್ಮಿಗಳು ಭೀಕರವಾಗಿ ಹತ್ಯೆ ಮಾಡಿದ್ದು ಜನ ಬೆಚ್ಚಿಬಿದ್ದಿದ್ದಾರೆ.

ಬೈಕ್ ನಲ್ಲಿ ಬಂದ 6 ಮಂದಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಆರ್ಮಾಸ್ಟ್ರಾಂಗ್ ಅವರನ್ನು ಆರು‌ ಜನರಿದ್ದ ದುಷ್ಕರ್ಮಿಗಳ ಗುಂಪು ಚೆನ್ನೈನ ಪೆರಂಬುರ್ ನ ಸದಾಯಪ್ಪನ್ ರಸ್ತೆಯ ಬಳಿ ಇರುವ ಅವರ ನಿವಾಸದ ಬಳಿ ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತು,ಆದರೆ ಅವರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.

ಆರ್ಮಾಸ್ಟ್ರಾಂಗ್ ಅವರ ಹತ್ಯೆ ಪ್ರಕರಣದ ತನಿಖೆಗೆ ಚೆನ್ನೈನ 10 ವಿಶೇಷ ಪೊಲೀಸರ ತಂಡಗಳನ್ನು ರಚಿಸಲಾಗಿದೆ.

ಆರ್ಮಾಸ್ಟ್ರಾಂಗ್ ಅವರ ಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಆರಂಭಿಸಿದ್ದಾರೆ.

ಚೆನ್ನೈನಲ್ಲಿ ಮಹಾನಗರ ಪಾಲಿಕೆ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಆರ್ಮಸ್ಟ್ರಾಂಗ್ ನಂತರ ಪೆರಂಬೂರ್ ‌ನಲ್ಲಿ ನೆಲೆಸಿದ್ದರು.

ಪೆರಂಬೂರಿನಲ್ಲಿ ಮನೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಕೆಲಸ ನೋಡಲು ಮನೆಯ ಬಳಿ ಬಂದಾಗ ದುಷ್ಕರ್ಮಿಗಳು ಕೊಲೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


Share this with Friends

Related Post