Mon. Dec 23rd, 2024

ವಿಧಾನಸಭೆ ವಿಸರ್ಜನೆಗೆ ಬಿ ಎಸ್ ವೈ ಆಗ್ರಹ

Share this with Friends

ಬೆಂಗಳೂರು, ಜು.4: ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ರಾಜ್ಯ ಬಿಜೆಪಿ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಹಮ್ಮಿಕೊಳ್ಳಲಾಯಿತು.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಡಿ. ವಿ ಸದಾನಂದ ಗೌಡ, ಬಿಜೆಪಿ ಉಸ್ತುವಾರಿ ರಾಧಾ ಮೋಹನ್ ಅಗರ್ವಾಲ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಡಾ. ಅಶ್ವಥ್ ನಾರಾಯಣ, ಶ್ರೀರಾಮುಲು ಮತ್ತಿತರ ನಾಯಕರು ಪಾಲ್ಗೊಂಡಿದ್ದರು.

ಈ ವಿಶೇಷ ಕಾರ್ಯಕಾರಿಣಿ ಸಭೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಬಿ.ಎಸ್ ಯಡಿಯೂರಪ್ಪ, ಪ್ರತಿ ಪಕ್ಷದ ನಾಯಕ ಆರ್ ಅಶೋಕ್ ಮತ್ತಿತರರು ಚಾಲನೆ ನೀಡಿದರು.

ಸಭೆಯಲ್ಲಿ ಪಾಲ್ಗೊಂಡಿದ್ದ ವೇಳೆ ಬಿ.ಎಸ್ ಯಡಿಯೂರಪ್ಪ ಮಾತನಾಡಿ ಕಾಂಗ್ರೆಸ್ ಪಕ್ಷಕ್ಕೆ ಅಧಿಕಾರ ನಡೆಸಲು ನೈತಿಕತೆಯೇ ಇಲ್ಲ, ಕೂಡಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ವಿಸರ್ಜನೆ ಮಾಡಿ ಚುನಾವಣೆ ಎದುರಿಸಲಿ ಎಂದು ಆಗ್ರಹಿಸಿದರು.

ಒಂದು ವೇಳೆ ಈಗಲೇ ಚುನಾವಣೆ ನಡೆದರೆ ನಮ್ಮ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.


Share this with Friends

Related Post