Sat. Dec 28th, 2024

ಸುಟ್ಟು ಕರಕಲಾದ ಕಾರು:ಬೆಂಕಿ ನಂದಿಸಿದ ಅಗ್ನಿಶಾಮಕ ಸಿಬ್ಬಂದಿ

Share this with Friends

ಮೈಸೂರು: ನಿಂತಿದ್ದ ಕಾರಿನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಹತ್ತಿಕೊಂಡು ಸುಟ್ಟುಕರಕಲಾದ ಘಟನೆ
ವಿವಿ ಮೊಹಲ್ಲಾದಲ್ಲಿ ನಡೆದಿದೆ.

ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ,ಆದರೂ ಕಾರು ಸಂಪೂರ್ಣ ಸುಟ್ಟು ಕರುಕಲಾಗಿದೆ.

ಕಾರಿನಲ್ಲಿ ಬಂದಿದ್ದವರು ರಸ್ತೆ ಬದಿ ಕಾರು ನಿಲ್ಲಿಸಿ ಹೋಟೆಲ್ ಗೆ ತೆರಳಿದ್ದರು.ಈ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಕೂಡಲೇ ಅಗ್ನಿಶಾಮಕ ಠಾಣೆಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಧಾವಿಸಿದ ಸಿಬ್ಬಂದಿ ಬೆಂಕಿಯನ್ನ ನಂದಿಸುವಲ್ಲಿ ಯಶಸ್ವಿಯಾದರು.ಆದರೂ‌ ಕಾರು ಸಂಪೂರ್ಣ ಸುಟ್ಟುಹೋಗಿದೆ.

ವಿವಿಪುರಂ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.


Share this with Friends

Related Post