Mon. Dec 23rd, 2024

ವಿಧಾನಸೌಧದ ಮುಂದೆಯೇ ದೇವರ ಹುಂಡಿ ಇಟ್ಟಿಬಿಡಿ : ವಿಜಯೇಂದ್ರ ವಾಗ್ದಾಳಿ

Vijayendra
Share this with Friends

ಮೈಸೂರು ,ಫೆ,22 : ರಾಜ್ಯ ಕಾಂಗ್ರೆಸ್ ಸರ್ಕಾರ ಶ್ರೀಮಂತ ದೇಗುಲಗಳಿಗೆ ಕನ್ನ ಹಾಕಲು ಮುಂದಾಗಿದೆ. ಅದರ ಬದಲು ಸರ್ಕಾರ ನಡೆಸಲು ಆಗಲ್ಲ ಎಂದು ವಿಧಾನಸೌಧದ ಮುಂದೆ ಹುಂಡಿ ಇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.

ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲು ನಗರಕ್ಕೆ ಗುರುವಾರ ಆಗಮಿಸಿದ್ದ ಅವರು ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದರು. 224 ಕ್ಷೇತ್ರಕ್ಕೆ ಒಂದೇ ಒಂದು ರೂ ಅನುದಾನವನ್ನೂ ಸರ್ಕಾರ ಕೊಡುತ್ತಿಲ್ಲ. ಸರ್ಕಾರಿ ನೌಕರರಿಗೂ ಸಂಬಳ ಕೊಡಲು ಕಷ್ಟಪಡುವ ಪರಿಸ್ಥಿತಿ ಬಂದಿದೆ. ಈಗ ಶ್ರೀಮಂತ ದೇವಾಲಯಗಳಿಗೆ ಕನ್ನ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಗ್ಯಾರಂಟಿಯಿಂದ ರಾಜ್ಯದ ಬೊಕ್ಕಸ ಖಾಲಿಯಾಗಿದೆ ಅಭಿವೃದ್ದಿ ಕೆಲಸಕ್ಕೆ ಅನುದಾನ ನೀಡುತ್ತಿಲ್ಲ. ರಾಜ್ಯ ಸರ್ಕಾರ ಶ್ರೀಮಂತ ದೇಗುಲಗಳಿಗೆ ಕನ್ನ ಹಾಕಲು ಮುಂದಾಗಿದೆ ದೇಗುಲಕ್ಕೆ ಕನ್ನ ಹಾಕುವ ಬದಲು ವಿಧಾನಸೌಧದ ಮುಂದೆ ಹುಂಡಿ ಇಡಿ ಎಂದು ಲೇವಡಿ ಮಾಡಿದರು.

ಕನ್ನಡ ನಾಡು-ನುಡಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಧಕ್ಕೆ ತರುತ್ತಿದ್ದಾರೆ. ಸರ್ಕಾರದ ಅಜೆಂಡಾ ಏನು ಎಂಬುದು ಆದೇಶಗಳಿಂದ ಗೊತ್ತಾಗುತ್ತದೆ . ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕನ್ನಡ ವಿರೋಧಿ ಚಿಂತನೆಯಲ್ಲಿದೆ . ಇಲ್ಲ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆಲೋಕಸಭೆ ಚುನಾವಣೆ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಆತಂಕದಲ್ಲಿದೆ. ಹೀಗಾಗಿ ದೆಹಲಿ ಚಲೋ ನಾಟಕ ಮಾಡಿ ಕೇಂದ್ರದ ಮೇಲೆ ಗೂಬೆ ಕೂರಿಸ್ತಿದ್ದಾರೆ ಎಂದು ಆರೋಪಿಸಿದರು.


Share this with Friends

Related Post