Tue. Dec 24th, 2024

ದೇಶದಲ್ಲಿ ಶಾಂತಿ ಕದಡಲು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ:ಡಿಕೆಶಿ‌ ವಾಗ್ದಾಳಿ

Share this with Friends

ಬೆಂಗಳೂರು,ಮಾ.12: ದೇಶದಲ್ಲಿ ಶಾಂತಿ ಕದಡಲು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲು ಆದೇಶ ಹೊರಡಿಸಿದ್ದಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಕೆಶಿ, ಕೇಂದ್ರ ಸರ್ಕಾರ ಮೂರುವರೆ ವರ್ಷ ನಿದ್ರೆ ಮಾಡುತ್ತಿತ್ತು,ಈಗ ಎಲೆಕ್ಷನ್ ಬಂದಿದೆ‌ ಅದಕ್ಕೆ ಸಿಎಎ‌ ಜಾರಿಗೆ ತಂದಿದೆ ಎಂದು ಕಿಡಿಕಾರಿದರು.

ಅಸ್ಸಾಂ, ಪಶ್ಚಿಮ ಬಂಗಾಳದಲ್ಲಿ ಜಾತಿ ಹೋರಾಟ ನಡೆಯಿತು, ದೇಶದಲ್ಲಿ ಶಾಂತಿ ಕದಲಿಸಬೇಕು ಎಂದು ಈ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ಎಲ್ಲಾ ಜಾತಿ ಧರ್ಮ ರಕ್ಷಣೆ ಮಾಡುವುದು ನಮ್ಮ ಪಕ್ಷದ ಕರ್ತವ್ಯ, ಹೀಗಾಗಿ ಸಿಎಎ ಜಾರಿಗೆ ತಂದಿರುವ ನಿರ್ಧಾರವನ್ನು ಖಂಡಿಸುತ್ತೇವೆ ಎಂದು ಹೇಳಿದರು.

ಇದೇ ವೇಳೆ ಚುನಾವಣೆಗೆ ಕಾಂಗ್ರೆಸ್ ಲಿಸ್ಟ್ ಬಗ್ಗೆ ಪ್ರತಿಕ್ರಿಯಿಸಿ, ಸ್ಕ್ರೀನಿಂಗ್ ಕಮಿಟಿ ಸಭೆ ಆಗಿದೆ. ಹೆಚ್ಚು ಕಡಿಮೆ ಎಲ್ಲಾ ಚರ್ಚೆ ಆಗಿದೆ. ಎಲ್ಲಾ ಹೆಸರುಗಳ ಬಗ್ಗೆಯೂ ಚರ್ಚೆ ಆಗಿದೆ. ಕೆಲವು ಸಿಂಗಲ್ ನೇಮ್ ಬಗ್ಗೆಯೂ ಸಮಾಲೋಚಿಸಲಾಗಿದೆ, ಸೆಂಟ್ರಲ್ ಎಲೆಕ್ಷನ್ ಕಮಿಟಿ ಯಾವತ್ತಾದರೂ ನಮಗೆ ಕರೆಯಬಹುದು, ನಾನು ಹಾಗೂ ಮುಖ್ಯ ಮಂತ್ರಿಗಳು ಹೋಗಿ ಫೈನಲ್ ಆಗಿ ಮಾತಾಡಿಕೊಂಡು ಬರುತ್ತೇವೆ ಎಂದು ‌ತಿಳಿಸಿದರು.

ಈ ಸೀಟ್ ವಿಚಾರದಲ್ಲಿ ನಮ್ಮ ಅಭಿಪ್ರಾಯ ಏನೇ ಇರಬಹುದು. ಆದರೆ ಹೈಕಮಾಂಡ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರು ಅಂತಿಮ ತೀರ್ಮಾನ ಮಾಡುತ್ತಾರೆ ಎಂದು ಡಿ.ಕೆ.ಶಿವಕುಮಾರ್ ಹೇಳಿದರು.


Share this with Friends

Related Post