Mon. Dec 23rd, 2024

ಚಾಮುಂಡಿ ಬೆಟ್ಟ ನಮ್ಮ ಸಂಸ್ಥಾನಕ್ಕೆ ಸೇರಿದ್ದು:ಯದುವೀರ್ ಕಡಕ್ ನುಡಿ

Share this with Friends

ಮೈಸೂರು,ಆ.15: ಚಾಮುಂಡಿ ಬೆಟ್ಟ ನಮ್ಮ ಸಂಸ್ಥಾನಕ್ಕೆ ಸೇರಿದ್ದು, ಪ್ರಾಧಿಕಾರ ರಚನೆ ಅಗತ್ಯವಿಲ್ಲ ಎಂದು ಮೈಸೂರು ಸಂಸದ ಯದುವೀರ್‌ ಒಡೆಯರ್‌ ಹೇಳಿದ್ದಾರೆ.

ಕರ್ನಾಟಕ ಸರ್ಕಾರ ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಚಾಮುಂಡಿ ಬೆಟ್ಟ ಈಗ ಹೇಗಿದೆಯೋ ಮುಂದೆಯೂ ಹಾಗೆಯೇ ಇರಲಿ ಎಂದು ಹೇಳಿದರು.

ಚಾಮುಂಡಿ ಬೆಟ್ಟ ಪ್ರಾಧಿಕಾರ ರಚನೆಗೆ ಕೋರ್ಟ್ ತಡೆಯಾಜ್ಞೆ ನೀಡಿದೆ. ದೇವಸ್ಥಾನದ ಜೊತೆ ಯಾವ ಸಂಸ್ಥಾನದ ಸಂಬಂಧ ಇದೆಯೋ ಆ ಸಂಸ್ಥಾನಕ್ಕೆ ದೇವಸ್ಥಾನ ಸೇರಬೇಕು ಎಂದು ಚಾಮುಂಡಿ ಬೆಟ್ಟ ತಮ್ಮ ಆಸ್ತಿ ಎಂಬುದನ್ನು ಪರೋಕ್ಷವಾಗಿ ಹೇಳಿದರು.

ಅರಮನೆಯಲ್ಲಿ ಸಂಪ್ರದಾಯದಂತೆ ಖಾಸಗಿ ದಸರಾವನ್ನು ಮೈಸೂರು ರಾಜಮನೆತನದವರು ನಡೆಸಲಿದ್ದಾರೆ. ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಹೇಳಿದರು.

ಬಿಜೆಪಿ ಮತ್ತು ಜೆಡಿಎಸ್‌ನ ಮೈಸೂರು ಪಾದಯಾತ್ರೆ ಯಶಸ್ವಿಯಾಗಿದೆ. ಪಕ್ಷದಲ್ಲಿನ ಬಂಡಾಯ ಚಟುವಟಿಕೆಗಳ ಬಗ್ಗೆ ನನಗೆ ಗೊತ್ತಿಲ್ಲ, ನಾವು ಒಗ್ಗಟ್ಟಾಗಿ ನಿಲ್ಲಬೇಕು ಎಂದು ಯದುವೀರ್ ತಿಳಿಸಿದರು.

ಯಾವುದೇ ಬದಲಾವಣೆಗಳಿಲ್ಲದೆ ಖಾತರಿ ಯೋಜನೆಗಳನ್ನು ಮುಂದುವರಿಸಬೇಕೆಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

ಖಾತ್ರಿ ಯೋಜನೆಗಳ ಭರವಸೆ ನೀಡಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಈಗ, ಯೋಜನೆಗಳನ್ನು ಮಾರ್ಪಡಿಸಬಾರದು ಎಂದು ಸಲಹೆ ನೀಡಿದರು.

ರಾಜ್ಯದ ಎಲ್ಲಾ ಅಣೆಕಟ್ಟುಗಳ ಸುರಕ್ಷತೆಯನ್ನು ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಯದುವೀರ್ ಮನವಿ ಮಾಡಿದರು.


Share this with Friends

Related Post