Mon. Dec 23rd, 2024

ಎಂ ಡಿ ಗೋಪಿನಾಥ್ ಅವರಿಗೆ ಚಾಣಕ್ಯ ಸೇವಾ ರತ್ನ ಪ್ರಶಸ್ತಿ

Share this with Friends

ಮೈಸೂರು,ಜು.3: ಕೆ ಎಂ ಪಿ ಕೆ ಚಾರಿಟೇಬಲ್ ಟ್ರಸ್ಟ್ 18ನೇ ವಾರ್ಷಿಕೋತ್ಸವದ ಅಂಗವಾಗಿ
ಸಾಧಕರಿಗೆ ಚಾಣಕ್ಯ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಮೈಸೂರಿನ ಸದ್ವಿದ್ಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕರೂ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಎಂ ಡಿ ಗೋಪಿನಾಥ್ ಅವರಿಗೆ ಸಹಕಾರಿ ಕ್ಷೇತ್ರದ ಅವರ ಸಾಧನೆಯನ್ನು ಗುರುತಿಸಿ ಚಾಣಕ್ಯ ಸೇವಾ ರತ್ನ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಯಿತು.

ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್ ಹಾಗೂ ಪದಾಧಿಕಾರಿಗಳು
ಕೃಷ್ಣಮೂರ್ತಿಪುರಂನಲ್ಲಿರುವ ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಆವರಣದಲ್ಲಿ ಗೋಪಿನಾಥ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಅಗಸ್ತ್ಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷೆ ಎಂ ಎನ್ ಸೌಮ್ಯ, ಖಜಾಂಚಿ ಕೆ ನಾಗರಾಜ, ನಿರ್ದೇಶಕ ಮಂಡಲಿ ಸದಸ್ಯರಾದ ಸಿ.ವಿ ಪಾರ್ಥಸಾರಥಿ, ಪ್ರಶಾಂತ್ ತಾತಾಚಾರ್, ಹೆಚ್ ಎಸ್. ಬಾಲಕೃಷ್ಣ, ಎಂ ಆರ್. ಚೇತನ್, ಹೆಚ್ ಪಿ. ಪಣಿರಾಜ್ ಎನ್,ಮಹಿಮ ಪಿ,ನಾಗಶ್ರೀ, ಕೆ ಎನ್ ಅರುಣ್, ಶಿವರುದ್ರಪ್ಪ, ರಾಜಮ್ಮ ಎಸ್. ಶಾಶ್ವತಿ ನಾಯಕ ಎಂ ಪಿ ಹಾಗೂ ಪ್ರಭಾರ ಕಾರ್ಯದರ್ಶಿ ಎನ್ ವೀಣಾ ಹಾಜರಿದ್ದರು.


Share this with Friends

Related Post