Fri. Nov 1st, 2024

ಚನ್ನಗಿರಿ ಪ್ರಕರಣ ಲಾಕಪ್ ಡೆತ್ ಅಲ್ಲ: ಸಿಎಂ ಸ್ಪಷ್ಟನೆ

Share this with Friends

ಮೈಸೂರು,ಮೇ‌.25: ಚನ್ನಗಿರಿಯ ಘಟನೆ ಲಾಕಪ್ ಡೆತ್ ಅಲ್ಲ, ಆತನಿಗೆ ಮೂರ್ಛೆ ರೋಗ ಇತ್ತು,ಅದರಿಂದಲೇ ಆತ ಮೃತಪಟ್ಟಿದ್ದಾನೆ ಎಂದು ಸಿಎಂ ಸ್ಪಷ್ಟ ಪಡಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಫ್‌ಐಆರ್ ಇಲ್ಲದೆ ಪೊಲೀಸರು ಠಾಣೆಗೆ ಕರೆ ತಂದಿದ್ದು ತಪ್ಪು,ಅದಕ್ಕಾಗಿ ಪೊಲೀಸ್ ಅಧಿಕಾರಿಗಳ ಅಮಾನತ್ತಿಗೆ ಆದೇಶ ಮಾಡಿದ್ದೇನೆ ಎಂದು ತಿಳಿಸಿದರು.

ರಾಕೇಶ್ ಸಿದ್ದರಾಮಯ್ಯ ವಿಚಾರದ ಕುರಿತು ಹೆಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿದ್ದು, ನನ್ನ ಮಗ ಸತ್ತು 8 ವರ್ಷ ಆಗಿದೆ. ಈಗ ಆ ವಿಚಾರವನ್ನು ಯಾವುದಕ್ಕೋ ಲಿಂಕ್ ಮಾಡಿ ಮಾತನಾಡುವುದು ಮೂರ್ಖತನ ಎಂದು ಹೇಳಿದರು.

ಅವರ ಮಗ ರೇಪ್ ಮಾಡಿ ಓಡಿ ಹೋಗಿರುವುದು. ಅದಕ್ಕೂ 2016ರಲ್ಲಿ ಸತ್ತು ಹೋದ ರಾಕೇಶ್ ವಿಚಾರಕ್ಕೂ ಏನು ಸಂಬಂಧ ಎಂದು ಪ್ರಶ್ನಿಸಿದರು.

ಪ್ರಜ್ವಲ್ ರೇವಣ್ಣ ಪಾಸ್ ಪೋರ್ಟ್ ವಿಚಾರದ ಕುರಿತು ಸರ್ಕಾರದಿಂದ ಕೇಂದ್ರಕ್ಕೆ ತಡವಾಗಿ ಪತ್ರ ಬಂತು ಎಂಬ ಕೇಂದ್ರ ಸಚಿವರ ಹೇಳಿಕೆಗೆ,ಇದು ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಅಷ್ಟೇ. ನಾನು 15 ದಿನಗಳ ಹಿಂದೆಯೇ ಪತ್ರ ಬರೆದಿದ್ದೇನೆ, ಪತ್ರ ಬರೆದರೂ ಉತ್ತರ ಬಂದಿಲ್ಲ. ಒಂದು ವೇಳೆ ನಾನು ಪತ್ರ ಬರೆದದ್ದು ತಡವೇ ಅಂದುಕೊಳ್ಳಿ. ಈಗ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ,ಸುಮ್ಮನೇ ಕಾಲ ಕಳೆಯುವುದು ಸರಿಯಲ್ಲ ಎಂದು ತಿರುಗೇಟು ನೀಡಿದರು.

ರೇಪ್‌ಗಿಂತ ಅದರ ವೀಡಿಯೋ ಹಂಚಿದ್ದು ದೊಡ್ಡ ಅಪರಾಧ ಎಂಬ ಹೆಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ರೇಪ್‌ಗಿಂತ ವೀಡಿಯೋ ಹಂಚಿದ್ದು ದೊಡ್ಡ ಅಪರಾಧ ಅಂಥ ಯಾವ ಕಾನೂನಿನಲ್ಲಿದೆ, ಕುಮಾರಸ್ವಾಮಿ ಏನಾದರೂ ಸೆಕ್ಷನ್ ಹೇಳಿದ್ದರಾ ಅದು ಭಾರತೀಯ ದಂಡ ಸಂಹಿತೆಯಲ್ಲಿದೆಯಾ ಎಂದು ಸಿದ್ದರಾಮಯ್ಯ ಕಾರವಾಗಿ ಪ್ರಶ್ನಿಸಿದರು.


Share this with Friends

Related Post