Fri. Mar 6th, 2026

ಚಿತ್ರೋದ್ಯಮದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ದ: ಸಿ.ಎಂ.ಸಿದ್ದರಾಮಯ್ಯ

Share this with Friends

ಬೆಂಗಳೂರು:ಸಮಾಜಮುಖಿ ಸಿನಿಮಾ ಮಾಡುವವರಿಗೆ- ಚಿತ್ರೋದ್ಯಮದ ಅಭಿವೃದ್ಧಿಗೆ ನಮ್ಮ ಸರ್ಕಾರ ಸದಾ ಸಿದ್ದವಿದೆ. ಅಗತ್ಯವಿರುವ ಎಲ್ಲಾ ನೆರವುಗಳನ್ನು ನೀಡಲು ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೇಲೆ “17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವ”ವನ್ನು ಉದ್ಘಾಟಿಸಿ ಮಾತನಾಡಿದ ಅವರು,ನಾವು ಪ್ರಥಮವಾಗಿ, ಅಂತಿಮವಾಗಿ ಮನುಷ್ಯರು. ನಾವು ಪ್ರತಿಯೊಬ್ಬರನ್ನೂ ಪ್ರೀತಿಯಿಂದ ಕಾಣುವ ಮೂಲಕ ಸಮ ಸಮಾಜ ಕಟ್ಟುವ ಕೆಲಸ ಮಾಡಬೇಕು. ಇದಕ್ಕೆ ಚಲನಚಿತ್ರ ಮಾಧ್ಯಮ‌ ನೆರವಾಗಬೇಕು.ಇತರೆ ದೇಶಗಳಲ್ಲಿ‌ನ‌ ಮಾನವೀಯ ಸಂಬಂಧಗಳು, ಇತರೆ ದೇಶಗಳಲ್ಲಿ ಆಚರಣೆಯಲ್ಲಿರುವ ಸಮ ಸಮಾಜದ ಆಚರಣೆಗಳು ಎಲ್ಲವನ್ನೂ ಅರ್ಥ ಮಾಡಿಕೊಳ್ಳಲು ನೆರವಾಗುತ್ತದೆ ಎಂದರು.

ಸಿನಿಮಾ ಮನರಂಜನೆ ಜೊತೆಗೆ ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಸಾಧನವಾಗಲಿ ಎಂದು ಕರೆ ನೀಡಿದ ಸಿಎಂ,ಸಮಾಜದಲ್ಲಿ ಅಸಮಾನತೆ ಇದೆ. ಅಸಮಾನತೆಗೆ ತುತ್ತಾಗಿರುವ ಮಹಿಳೆಯರು, ಹಿಂದುಳಿದವರು, ರೈತ, ದಲಿತ ಸಮುದಾಯಗಳಿವೆ.  ಈ ಸಮುದಾಯಗಳ ಬೆಳವಣಿಗೆ ಮತ್ತು ಬದಲಾವಣೆಗೆ ಆತ್ಮವಿಶ್ವಾಸ ತುಂಬುವ ರೀತಿಯಲ್ಲಿ  ಶ್ರಮಿಸಿದಾಗ ಸಿನಿಮಾ ಮಾಧ್ಯಮದ ಆಶಯ ಮತ್ತು ಉದ್ದೇಶ ಈಡೇರಿದಂತಾಗುತ್ತದೆ. ಡಾ.ರಾಜ್ ಕುಮಾರ್ ಅವರ ಸಿನಿಮಾಗಳಲ್ಲಿ ಈ ಸಾಮಾಜಿಕ‌ ಜವಾಬ್ದಾರಿಯನ್ನು ಕಾಣಲು ಸಾಧ್ಯವಿತ್ತು ಎಂದು ಸ್ಮರಿಸಿದರು.

ವಿಶ್ವದ ಇತರೆ ಸಮಾಜಗಳು ಹಾಗೂ ಇತರೆ ದೇಶಗಳ ಜನ ಜೀವನ ಮತ್ತು ಸಂಸ್ಕೃತಿ, ಸಮಾನತೆಯನ್ನು ಅರ್ಥ ಮಾಡಿಕೊಳ್ಳಲು ಮತ್ತು ಸಮಾಜದಲ್ಲಿ ಬದಲಾವಣೆ ತರಲು  ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನೆರವಾಗಲಿ ಎಂದರು.

ಪ್ರಕಾಶ್ ರಾಜ್ ಸಿನಿಮಾಗೆ ಸೀಮಿತವಾಗಿಲ್ಲ:

ಚಿತ್ರೋತ್ಸವದ ರಾಯಭಾರಿ ಪ್ರಕಾಶ್ ರಾಜ್ ಸಿನಿಮಾಗೆ ಮಾತ್ರ ಸೀಮಿತವಾಗದೆ ಸಾಮಾಜಿಕ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದಾರೆ. ಶೋಷಿತ, ರೈತ, ದಲಿತ, ಹಿಂದುಳಿದವರು ಮತ್ತು ಸಂವಿಧಾನದ ಆಶಯಗಳ‌ ಪರವಾಗಿ ಹೋರಾಡುತ್ತಿದ್ದಾರೆ. ಇವರ ಈ ಸಾಮಾಜಿಕ ಬದ್ದತೆ ಅಭಿನಂದನೀಯ ಎಂದರು.


Share this with Friends

Related Post