ಮೈಸೂರು,ಮೇ.13: ಶ್ರೀ ಶಂಕರಾಚಾರ್ಯರ ಜಯಂತಿ ಅಂಗವಾಗಿ ಏರ್ಪಡಿಸಿದ್ದ ಮೆರವಣಿಗೆಯಲ್ಲಿ ಚಿಣ್ಣರು ಬಾಲ ಶಂಕರರ ವೇಷ ಧರಿಸಿ ಎಲ್ಲರ ಗಮನ ಸೆಳೆದರು.
ನಗರದ ವಿದ್ಯಾರಣ್ಯಪುರಂ ವಿಪ್ರ ಜಾಗೃತಿ ವೇದಿಕೆ ವತಿಯಿಂದ ಆದಿ ಗುರು ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಹಮ್ಮಿಕೊಳ್ಳಲಾಯಿತು.
ಶಂಕರಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅಲಂಕೃತ ವಾಹನದಲ್ಲಿರಿಸಿ ವಿದ್ಯಾರಣ್ಯಪುರಂ ಮುಖ್ಯ ರಸ್ತೆಯಲ್ಲಿ ಭವ್ಯ ಮೆರವಣಿಗೆ ಮಾಡಲಾಯಿತು.
ವಿಶೇಷವಾಗಿ ಮಕ್ಕಳು ಬಾಲ ಶಂಕರ ವೇಶವನ್ನು ಧರಿಸಿ ಮೆರವಣಿಗೆಯಲ್ಲಿ ಸಾಗಿದರು,ನಾದಸ್ವರ, ಶಂಕರಾಚಾರ್ಯ ಕೀರ್ತನೆಗಳು, ಭಜನೆ, ದೇವರ ನಾಮ, ಸಂಕೀರ್ತಿಗಳನ್ನು ಹಾಡುತ್ತಾ ಮೆರವಣಿಗೆಯಲ್ಲಿ ಭಕ್ತರು ಸಾಗಿದ್ದು ಸಾರ್ವಜನಿಕರ ಗಮನ ಸೆಳೆಯಿತು.
ಈ ವೇಳೆ ಶಾಸಕ ಟಿ ಎಸ್ ಶ್ರೀವತ್ಸ ಮಾತನಾಡಿ, ಶಂಕರಾಚಾರ್ಯರು ತಮ್ಮ ಎಂಟನೇ ವರ್ಷದಲ್ಲಿಯೇ ಸನ್ಯಾಸತ್ವ ಸ್ವೀಕರಿಸಿ, ದೇಶದ ಉದ್ದಗಲಕ್ಕೂ ಸಂಚರಿಸಿ ಸನಾತನ ಹಿಂದೂ ಸಂಸ್ಕೃತಿಯನ್ನು ಮರುಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದರು ಎಂದು ಹೇಳಿದರು.
ಮೂಡ ಮಾಜಿ ಅಧ್ಯಕ್ಷ ಎಚ್. ವಿ ರಾಜೀವ್ ಮಾತನಾಡಿ,ಶಂಕರಾಚಾರ್ಯರ ಬದುಕನ್ನು ಸಮಚಿತ್ತದಿಂದ ಅವ ಲೋಕಿಸಿದಾಗ ಭಾರತೀಯ ಅಧ್ಯಾತ್ಮಿಕ ಪರಂಪರೆಗೆ ಅಪಾರ ಕೊಡುಗೆ ಸಲ್ಲಿಸಿ ರುವುದು ಕಂಡು ಬರುತ್ತದೆ ಎಂದು ತಿಳಿಸಿದರು.
ಹಿರಿಯ ಸಮಾಜ ಸೇವಕರಾದ ಕೆ ರಘುರಾಮ್ ವಾಜಪೇಯಿ, ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷರಾದ ಡಿ ಟಿ ಪ್ರಕಾಶ್,ನಗರ ಪಾಲಿಕೆ ಮಾಜಿ ಸದಸ್ಯ ಮಾ ವಿ ರಾಮಪ್ರಸಾದ್, ವಿಪ್ರ ಸಂಗಮ ಅಧ್ಯಕ್ಷರಾದ ಡಾಕ್ಟರ್ ಲಕ್ಷ್ಮಿ, ಗ್ರಾಮಾಂತರ ಅಧ್ಯಕ್ಷರಾದ ಗೋಪಾಲ್ ರಾವ್,ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆ ಪ್ರಧಾನ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್, ವಿಪ್ರ ಜಾಗೃತಿ ವೇದಿಕೆಯ ಉಪಾಧ್ಯಕ್ಷ ಆರ್ ನಾಗರಾಜ್, ಕಾರ್ಯದರ್ಶಿ ಮುಳ್ಳೂರು ಸುರೇಶ್, ಸಹ ಕಾರ್ಯದರ್ಶಿ ಎಚ್ ಸಿ ಮುರುಗೇಶ್, ಖಜಾಂಜಿ ಎಂ ವಿ ಮಂಜುನಾಥ್, ಸುಚಿಂದ್ರ ತೀರ್ಥ, ಶ್ರೀಕಾಂತ್ ಕಶ್ಯಪ್ ಮತ್ತಿತರರು ಭಾಗವಹಿಸಿದ್ದರು.