Mon. Dec 23rd, 2024

ಕೋರಿಯಾಗ್ರಾಫರ್ ಜಾನಿ ಮಾಸ್ಟರ್ ಬಂಧನ

Share this with Friends

ಹೈದರಾಬಾದ್: ತೆಲುಗು, ತಮಿಳು ಚಿತ್ರರಂಗದ ಖ್ಯಾತ ಕೋರಿಯಾಗ್ರಾಫರ್ ಜಾನಿ ಮಾಸ್ಟರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಸಹ ಕೊರಿಯೋಗ್ರಾಫರ್‌ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮೇಲೆ ಜಾನಿ ಮಾಸ್ಟರ್‌ನನ್ನು ಹೈದರಾಬಾದ್ ಪೊಲೀಸರು ಅರೆಸ್ಟ್ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ.

ಜಾನಿ ಮಾಸ್ಟರ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅವರ ಜೊತೆ ಕೆಲಸ ಮಾಡುತ್ತಿದ್ದ ಯುವತಿ ರಾಯದುರ್ಗ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ತನ್ನ ಮೇಲೆ ಅತ್ಯಾಚಾರ ಎಸಗಿ, ಬೆದರಿಕೆ ಹಾಕಿ ದೈಹಿಕ ಹಲ್ಲೆ ನಡೆಸಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದರು.

ಸಂತ್ರಸ್ಥೆಯ ದೂರಿನ ಆಧಾರದ ಮೇಲೆ ಎಫ್‌ಐಆರ್‌ ದಾಖಲಿಸಿಕೊಂಡ ಪೊಲೀಸರು ಜಾನಿ ಮಾಸ್ಟರ್‌ ನನ್ನು ಬಂಧಿಸಿದ್ದಾರೆ. ಈಗ ಈ ಪ್ರಕರಣವನ್ನು ನರಸಿಂಗಿ ಪೊಲೀಸ್‌ ಠಾಣೆಗೆ ವರ್ಗಾಯಿಸಲಾಗಿದೆ.

ಧಿ ಡ್ಯಾನ್ಸ್‌ ಶೋ ಮೂಲಕ ಪರಿಚಯವಾದ ಜಾನಿ ಮಾಸ್ಟರ್‌ ಈಗ ಟಾಲಿವುಡ್‌ನಲ್ಲಿ ಸ್ಟಾರ್ ಕೊರಿಯೋಗ್ರಾಫರ್ ಆಗಿ ಹೆಸರು ಮಾಡಿದ್ದು ಆತನ ಬಂಧನದಿಂದ ಚಿತ್ರರಂಗದಲ್ಲಿ ಗಲಿಬಿಲಿ ಉಂಟಾಗಿದೆ.

ಟಾಲಿವುಡ್‌ ಮಾತ್ರವಲ್ಲದೇ ಕನ್ನಡ, ತಮಿಳು, ಮಲಯಾಳಂ, ಹಿಂದಿ ಸಿನಿಮಾಗಳಿಗೂ ಅವರು ಕೊರಿಯೋಗ್ರಫಿ ಮಾಡಿದ್ದಾರೆ. ಆದರೆ ಅವರ ಮೇಲಿನ ಆರೋಪ,ಬಂಧನ ತೆಲುಗು ಸಿನಿ ರಂಗದಲ್ಲಿ ಸಂಚಲನ ಮೂಡಿಸಿದೆ.


Share this with Friends

Related Post