Tue. Dec 24th, 2024

ಚುನಾವಣೆ ಸನಿಹ: ಜಿಲ್ಲೆಯಾದ್ಯಂತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಿ-ಡಾ. ಕೆ ವಿ ರಾಜೇಂದ್ರ

Share this with Friends

ಮೈಸೂರು,ಫೆ.20: ಲೋಕಸಭಾ ಚುನಾವಣೆ ಸಮೀಪಸುತ್ತಿರುವುದರಿಂದ ಜಿಲ್ಲೆಯಾದ್ಯಂತ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು
ಅಧಿಕಾರಿಗಳಿಗೆ ಡಿಸಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ಕೆ ವಿ ರಾಜೇಂದ್ರ ಸೂಚಿಸಿದರು.

ಕರ್ನಾಟಕ ಕಲಾಮಂದಿರದಲ್ಲಿಂದು ಆಯೋಜಿಸಲಾಗಿದ್ದ ಎ ಇ ಒ, ವಿ ವಿ ಟಿ, ಎ ಟಿ, ಇ ಟಿ, ಐ ಟಿ, ಎಂ ಸಿ ಎಂ ಸಿ ತಂಡಗಳ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ಪ್ರತಿಯೊಬ್ಬ ಅಧಿಕಾರಿಯು ಬಹಳ ಶ್ರದ್ದೆಯಿಂದ ಕಾರ್ಯನಿರ್ವಾಹಿಸಬೇಕು ಎಂದು ಸೂಚಿಸಿದರು.

ಲೋಕಸಭಾ ಚುನಾವಣೆ ಮಾರ್ಚ್ ನಲ್ಲಿ ನಡೆಯುವ ಸಾಧ್ಯತೆ ಇದೆ, ಅದಕ್ಕೆ ಕಟ್ಟು ನಿಟ್ಟಿನ ಸಿದ್ಧತೆ ಮಾಡಿಕೊಳ್ಳಬೇಕಿದೆ. ಅದಕ್ಕಾಗಿ ಅಧಿಕಾರಿಗಳನ್ನು ತಂಡಗಳಾನ್ನಾಗಿ ರೂಪಿಸಿ, ಕೆಲಸದ ಪಟ್ಟಿಯನ್ನು ನೀಡಲಾಗುತ್ತದೆ ಅದರನ್ವಯ ಕಾರ್ಯನಿರ್ವಾಹಿಸಬೇಕು ಎಂದು ಹೇಳಿದರು.

ಶೇ.100 ರಷ್ಟು ನಮ್ಮ ಪ್ರಯತ್ನದಿಂದ ಯಾವುದೇ ರೀತಿಯ ಸಮಸ್ಯೆಗಳು ಎದುರಾಗದಂತೆ ಎಚ್ಚರಿಕೆಯಿಂದ ಯಶಸ್ವಿಯಾಗಿ ಮಾಡಬೇಕು. ಮಾದರಿ ನೀತಿ ಸಂಹಿತೆಯು ಚುನಾವಣೆ ಪ್ರಾರಂಭವಾಗಿ ಅದರ ಫಲಿತಾಂಶ ಪ್ರಕಟವಾಗುವವರೆಗೂ ಜಾರಿಯಲ್ಲಿರುವುದರಿಂದ ಈ ಸಮಯದಲ್ಲಿ ಅಧಿಕಾರಿಗಳು ಜಿಲ್ಲೆಯಾದ್ಯಂತ ಅವಶ್ಯಕತೆ ಇರುವ ಸ್ಥಳಗಳಲ್ಲಿ ಚೆಕ್ ಪೋಸ್ಟ್ ಗಳನ್ನು ನಿರ್ಮಿಸಬೇಕು. ಕಳೆದಬಾರಿ ಇದ್ದ ಸ್ಥಳದಲ್ಲೇ ಚೆಕ್ ಪೋಸ್ಟ್ ನಿರ್ಮಿಸುವ ಬದಲು ಸೂಕ್ತ ಸ್ಥಳವನ್ನು ಆರಿಸಿ ಎಂದು ಸಲಹೆ ನೀಡಿದರು.

ಚುನಾವಣಾ ಪ್ರಚಾರದ ಸಂದರ್ಭದಲ್ಲಿ ರಾಜಕೀಯ ಪಕ್ಷಗಳು ಜಾಹೀರಾತು, ಸರಕಾರಿ ಮತ್ತು ಅನುಧಾನಿತ ಕಟ್ಟಡಗಳನ್ನು ಬಳಸಿಕೊಳ್ಳದಂತೆ, ಚುನಾವಣ ಸಭೆಗಳ ಸಂಬಂಧ ಅಧಿಕಾರಿಗಳ ಅನುಮತಿಯನ್ನು ಪಡೆಯಬೇಕು. ಸಾಮಾನ್ಯ ಜನರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರವಹಿಸಿ ಪ್ರಚಾರ ಕೈಗೊಳ್ಳಬೇಕು ಎಂದು ತಿಳಿಸಿದರು.

ಚುನಾವಣೆ ಕಾರ್ಯ ನಿರ್ವಹಿಸುವ ಅಧಿಕಾರಿಗಳು ಪಕ್ಕದ ಕ್ಷೇತ್ರದ ಚುನಾವಣಾ ಅಧಿಕಾರಿಗಳೊಡನೆ ಸೌಹಾರ್ದತೆಯಿಂದ ನಡೆದುಕೊಂಡು, ಯಾವುದೇ ಕಾರಣಕ್ಕೂ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರ ವಹಿಸಿ ಎಂದು ತಾಕೀತು ಮಾಡಿದರು ಡಿಸಿ.

ಚುನಾವಣೆ ಸಮಯದಲ್ಲಿ ಪ್ರತಿಯೊಬ್ಬ ಅಧಿಕಾರಿಯೂ ಪ್ರತಿ ನಿಮಿಷವೂ ಶ್ರದ್ದೆಯಿಂದ ಕಾರ್ಯನಿರ್ವಾಹಿಸಬೇಕು. ಸಣ್ಣ ನೆಪ ಹೇಳಿ ಗೈರಾಗುವುದು, ಕೆಲಸದ ಸಮಯದಲ್ಲಿ ಕಾಲ ಹರಣ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಗಂಭೀರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಾ.ರಾಜೇಂದ್ರ ಎಚ್ಚರಿಸಿದರು.

ತರಬೇತಿ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್, ಜಿಲ್ಲಾಪಂಚಾಯತ್ ಸಿಇಒ ಕೆ. ಎಂ ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸೀಮಾ ಲಾಟ್ಕರ್, ಅಪರ ಜಿಲ್ಲಾಧಿಕಾರಿ ವಿ.ಶಿವರಾಜು ಮತ್ತಿತರರ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.


Share this with Friends

Related Post