Thu. Jan 9th, 2025

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ರಾಯಭಾರಿ ನಟ ಕಿಶೋರ್ ಗೆ ಸಿಎಂ ಅಭಿನಂದನೆ

Share this with Friends

ಬೆಂಗಳೂರು: 16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಬರುವ ಮಾರ್ಚ್‌ 1ರಿಂದ‌ 8 ರವರೆಗೆ ನಡೆಯಲಿದೆ.

16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ
ಖ್ಯಾತ ನಟ ಕಿಶೋರ್ ಕುಮಾರ್. ಜಿ‌ ನೇಮಕವಾಗಿದ್ದಾರೆ.

ಈ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ ನೇಮಕಗೊಂಡಿರುವ ನಟ ಕಿಶೋರ್ ಕುಮಾರ್. ಜಿ‌ ಅವರಿಗೆ ಮುಖ್ಯ ಮಂತ್ರಿ‌ ಸಿದ್ದರಾಮಯ್ಯ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಸರ್ವ ಜನಾಂಗದ ಶಾಂತಿಯ ತೋಟ ಎಂಬ ಘೋಷವಾಕ್ಯದಡಿ ಈ ಬಾರಿಯ ಚಲನಚಿತ್ರೋತ್ಸವವನ್ನು ಆಯೋಜಿಸಲಾಗುತ್ತಿದ್ದು, ಈ ಸಾಲುಗಳಿಗೆ ಬದ್ಧವಾಗಿರುವ ಕಿಶೋರ್ ಅವರ ಮುಂದಾಳತ್ವದಲ್ಲಿ ಬೆಂಗಳೂರು ಚಲನಚಿತ್ರೋತ್ಸವ ಅತ್ಯಂತ ಯಶಸ್ವಿಯಾಗಲಿದೆ ಎಂದು ಮುಖ್ಯ ಮಂತ್ರಿಗಳು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿ ಸಿಎಂ ಸಿದ್ದರಾಮಯ್ಯ ಕಿಶೋರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.


Share this with Friends

Related Post