Mon. Nov 4th, 2024

ವಕ್ಫ್ ಆಸ್ತಿ ಕುರಿತು ಬಸವರಾಜ ಬೊಮ್ಮಾಯಿ ವಿರುದ್ಧ ಸಿಎಂ ಟೀಕೆ

Share this with Friends

ಹುಬ್ಬಳ್ಳಿ: ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದಾಗ ಒತ್ತುವರಿಯಾಗಿರುವ ವಕ್ಫ್ ಆಸ್ತಿಯನ್ನು ಕಾಪಾಡುವುದಾಗಿ ಹೇಳಿದ್ದರು ಈಗ ಉಲ್ಟಾ ಹೊಡೆದದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬಸವರಾಜ ಬೊಮ್ಮಾಯಿಯವರು ರಾಜಕೀಯ ಕಾರಣಕ್ಕಾಗಿ ಈಗ ವಿರುದ್ಧವಾಗಿ ಮಾತನಾಡುತ್ತಾರೆ, ಅವರೇ ಹೇಳಿದ್ದ ಮಾತುಗಳಿಗೆ ರಾಜಕೀಯ ಕಾರಣಕ್ಕಾಗಿ ಉಲ್ಟಾ ಹೊಡೆದಿದ್ದಾರೆ ಎಂದು ಟೀಕಿಸಿದರು.

ಹುಬ್ಬಳ್ಳಿಯಲ್ಲಿ ಸೋಮವಾರ ಸಿಎಂ ಮಾಧ್ಯಮದವರೊಂದಿಗೆ ಮಾತನಾಡಿದರು.

ಬಿಜೆಪಿಯವರು ರಾಜಕಾರಣಕ್ಕಾಗಿ ಈ ವಿಚಾರವನ್ನು ಇಟ್ಟುಕೊಂಡು ಹೋರಾಡುತ್ತಿದ್ದಾರೆ. ವಕ್ಫ್ ಆಸ್ತಿ ವಿಚಾರ ನಿನ್ನೆ ಮೊನ್ನೆಯದಲ್ಲ. ಬಿಜೆಪಿ ಸರ್ಕಾರದ ಕಾಲದಲ್ಲೂ ನೋಟೀಸು ಕೊಟ್ಟಿದ್ದಾರೆ, ಎಲ್ಲಾ ಕಾಲದಲ್ಲಿಯೂ ನೋಟೀಸು ನೀಡಲಾಗಿದೆ ಎಂಬುದು ಜನರಿಗೆ ಅರ್ಥವಾಗಿದೆ ಎಂದು ಹೇಳಿದರು.

ವಕ್ಫ್ ಆಸ್ತಿ ವಿಚಾರ ನಮಗೆ ಗೊತ್ತಾದ ತಕ್ಷಣವೇ ನೋಟೀಸು ಹಿಂಪಡೆಯಲಾಗಿದೆ . ಬಿಜೆಪಿ ಅವಧಿಯಲ್ಲಿ 216 ಪ್ರಕರಣಗಳಲ್ಲಿ ನೋಟೀಸು ಕೊಟ್ಟಿದ್ದರು. ಯಡಿಯೂರಪ್ಪ, ಸದಾನಂದ ಗೌಡ, ಜಗದೀಶ್ ಶೆಟ್ಟರ್, ಹೆಚ್.ಡಿ ಕುಮಾಸ್ವಾಮಿ ಇದ್ದಾಗ ಏಕೆ ನೋಟೀಸು ಕೊಟ್ಟಿದ್ದಾರೆ ಎಂದು ಸಿದ್ದು ಕಾರವಾಗಿ ಪ್ರಶ್ನಿಸಿದರು.

ಬಿಜೆಪಿಯ ಈ ಡಬ್ಬಲ್ ಗೇಮ್ ವಿಚಾರವನ್ನು ಜನರಿಗೆ ನಾವು ತಲುಪಿಸುತ್ತಿದ್ದೇವೆ ಎಂದು ತಿಳಿಸಿದರು.

ತೆರಿಗೆ ವಿಚಾರದಲ್ಲಿ ಕೇಂದ್ರದಿಂದ ಅನ್ಯಾಯವಾಗುತ್ತಿರುವ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ 16 ನೇ ಹಣಕಾಸು ಆಯೋಗದವರು ಬೆಂಗಳೂರಿಗೆ ಭೇಟಿ ನೀಡಿದಾಗ 15 ನೇ ಹಣಕಾಸು ಆಯೋಗದಿಂದ ಕರ್ನಾಟಕಕ್ಕೆ ಅನ್ಯಾಯವಾಗಿರುವ ಅನ್ಯಾಯದ ಬಗ್ಗೆ ಗಮನ ಸೆಳೆದಿದ್ದೇವೆ. ಸುಮಾರು 4.50 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚು ಮೊತ್ತವನ್ನು ವರ್ಷಕ್ಕೆ ತೆರಿಗೆ ನೀಡುತ್ತಿದ್ದೇವೆ. ಅದರಲ್ಲಿ ನಮಗೆ ವಾಪಸ್ಸು ಬರುವುದು 55 ರಿಂದ 60 ಸಾವಿರ ಕೋಟಿ ರೂಪಯಿಗಳಷ್ಟು ಮಾತ್ರ. ಇದು ನ್ಯಾಯವೇ ಎಂದು ಸಿಎಂ ಪ್ರಶ್ನಿಸಿದರು.


Share this with Friends

Related Post