ನವದೆಹಲಿ,ಮಾ.21: ಮದ್ಯ ನೀತಿ ಪ್ರಕರಣದಲ್ಲಿ ಆರೋಪಿಯಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ.
ಕೇಜ್ರಿವಾಲ್ ಅವರಿಗೆ ಬಂಧನದಿಂದ ರಕ್ಷಣೆ ನೀಡಲು ಗುರುವಾರ ದೆಹಲಿ ಹೈಕೋರ್ಟ್ ನಿರಾಕರಿಸಿತ್ತು.
ಈ ಹಿನ್ನೆಲೆಯಲ್ಲಿ ಇಡಿಯ
12 ಅಧಿಕಾರಿಗಳ ತಂಡ ಸರ್ಚ್ ವಾರಂಟ್ನೊಂದಿಗೆ ದೆಹಲಿ ಸಿಎಂ ಕೇಜ್ರಿವಾಲ್ ನಿವಾಸಕ್ಕೆ ತೆರಳಿ ಪರಿಶೀಲನೆ ನಡೆಸಿತು.
ಈ ಸಂದರ್ಭದಲ್ಲಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದ ಅಧಿಕಾರಿಗಳ ತಂಡ ನಂತರ ಕೇಜ್ರಿವಾಲ್ ಅವರನ್ನು ಬಂಧಿಸಿದೆ.
ಎಂಟೊಂಬತ್ತು ಬಾರಿ ಸಮನ್ಸ್ ನೀಡಿದ್ದರೂ ಕ್ಯಾರೇ ಅನ್ನದ ಕೇಜ್ರಿವಾಲ್ ಅವರನ್ನು ಕಡೆಗೂ ಇಂದು ಇಡಿ ಅಧಿಕರಿಗಳು ಬಂಧಿಸಿದ್ದಾರೆ.