Fri. Nov 1st, 2024

ರೈತ ಸಂಘಟನೆಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ

Share this with Friends

ಬೆಂಗಳೂರು, ಫೆ.11: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ರಾಜ್ಯದ ರೈತ ಸಂಘಟನೆಗಳೊಂದಿಗೆ ಸಭೆ ನಡೆಸಿದರು.

ಸುಮಾರು 218 ಮಂದಿ ರೈತ ಪ್ರತಿನಿಧಿಗಳು,ಸಂಘಟನೆಗಳು ಹಾಗೂ ರೈತ ಮುಖಂಡರೊಂದಿಗೆ 2024-25ನೆ ಸಾಲಿನ ಆಯವ್ಯಯದ ಪೂರ್ವಭಾವಿ ಸಭೆ ನಡೆಸಿ ಚರ್ಚಿಸಿದರು.

ಈ ವೇಳೆ ರೈತ ಮುಖಂಡರಾದ‌ ಚುಕ್ಕಿ ನಂಜುಂಡಸ್ವಾಮಿ ಅವರು ರೈತರ ಸಮಸ್ಯೆಗಳ ಬಗ್ಗೆ ‌ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

ಬಜೆಟ್ ರೈತಪರವಾಗಿರಲಿ,ಕೃಷಿಗೆ ಹಚ್ಚು ಆಧ್ಯತೆ ನೀಡಬೇಕೆಂದು ರೈತ ಮುಖಂಡರು ‌ಮನವಿ ಮಾಡಿದರು.

ಪಶುಸಂಗೋಪನೆ ಸಚಿವ ವೆಂಕಟೇಶ್ ಮುಖ್ಯಮಂತ್ರಿಗಳ ಸಲಹೆಗಾರ ಬಿ.ಆರ್.ಪಾಟೀಲ್,ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್, ಶಾಸಕ ದರ್ಶನ್ ಪುಟ್ಟಣ್ಣಯ್ಯ,ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಡಾ: ಶಾಲಿನಿ ರಜನೀಶ್ ಉಪಸ್ಥಿತರಿದ್ದರು.

ರೈತ ಸಂಘಟನೆಗಳ ಮುಖಂಡರಾದ ಬಡಗಲಪುರ ನಾಗೇಂದ್ರ, ಎಚ್.ಆರ್ .ಬಸವರಾಜಪ್ಪ, ವೀರಸಂಗಯ್ಯ, ಚುಕ್ಕಿ ನಂಜುಂಡಸ್ವಾಮಿ, ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮುಖಂಡರಾದ ಸುನಂದಾ ಜಯರಾಂ ಸೇರಿದಂತೆ ವಿವಿಧ ರೈತ ಸಂಘಟನೆಗಳ 218 ಮಂದಿ ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು.


Share this with Friends

Related Post