ಬೆಂಗಳೂರು, ಮಾ.18: ಕಾವೇರಿ, ಕಬಿನಿಯಲ್ಲಿ ಕುಡಿಯುವ ನೀರಿಗೆ ಅಗತ್ಯ ಇರುವಷ್ಟು ನೀರನ್ನು ಸಂಗ್ರಹಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮಾಧ್ಯಮಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಿಎಂ,ಜೂನ್ ಅಂತ್ಯದವರೆಗೂ ಸಾಕಾಗುವಷ್ಟು ನೀರನ್ನು ಸಂಗ್ರಹಿಸಿದ್ದೇವೆ ಕೆ ಆರ್ ಎಸ್ ನಲ್ಲಿ 11.02, ಕಬಿನಿಯಲ್ಲಿ 9.02 ಟಿಎಂಸಿ ನೀರು ಸಂಗ್ರಹವಿದೆ ಎಂದು ಹೇಳಿದರು.
14000 ಸರ್ಕಾರಿ ಬೋರ್ ವೆಲ್ ಗಳಲ್ಲಿ 6900 ಬತ್ತಿವೆ, ಹೀಗಾಗಿ ಸಮಸ್ಯೆ ಆಗಿದೆ, 110 ಹಳ್ಳಿಗಳಲ್ಲಿ 55 ಹಳ್ಳಿಗಳಿಗೆ ಸಮಸ್ಯೆ ಆಗಿದೆ. ಜೂನ್ ಅಂತ್ಯಕ್ಕೆ ಕಾವೇರಿ 5 ನೇ ಹಂತದ ಕಾಮಗಾರಿ ಮುಕ್ತಾಯವಾಗಿ 775 ಎಂ ಎಲ್ ಡಿ ಹೆಚ್ಚುವರಿ ನೀರು ಸಿಗಲಿದ್ದು, ಇದು 110 ಹಳ್ಳಿಗಳಿಗೆ ಸರಬರಾಜು ಆಗಲಿದೆ ಎಂದು ವಿವರಿಸಿದರು.
313 ಸ್ಥಳಗಳಲ್ಲಿ ಹೊಸದಾಗಿ ಬೋರ್ ವೆಲ್ ಕೊರೆಸುತ್ತಿದ್ದೇವೆ. 1200 ನಿಷ್ಕ್ರಿಯ ಬೋರ್ ಗಳಿಗೆ ಮರುಜೀವ ನೀಡಲಾಗುವುದು,
ಕೊಳೆಗೇರಿ, ಎತ್ತರದ ಪ್ರದೇಶದಲ್ಲಿ ಹಾಗೂ ಬೋರ್ ವೆಲ್ ಮೇಲೆ ಅಬಲಂಬಿತ ಪ್ರದೇಶಗಳಲ್ಲಿ ಕೆ ಎಂ ಎಫ್ ಸೇರಿ ಎಲ್ಲಾ ಖಾಸಗಿ ಟ್ಯಾಂಕರ್ ಗಳನ್ನು ಬಳಸಲು ಸೂಚಿಸುದ್ದೇನೆ ಎಂದು ತಿಳಿಸಿದರು.
ಕಂಟ್ರೋಲ್ ರೂಮ್ ಗಳ ಸಂಖ್ಯೆ ಹೆಚ್ವಿಸಿ ದೂರುಬಂದ ತಕ್ಷಣ ಆ ಪ್ರದೇಶಗಳಿಗೆ ನೀರು ಸರಬರಾಜು ಮಾಡಲು ಸೂಚಿಸಲಾಗಿದೆ. ಟಾಸ್ಕ್ ಫೋರ್ಸ್ ಹೆಚ್ವಿಸಿ ದೂರುಗಳಿಗೆ ತಕ್ಷಣ ಸ್ಪಂದಿಸಲು ಹೇಳಲಾಗಿದೆ,ಪಾರ್ಕ್ ಗಳಲ್ಲಿ ಕುಡಿಯುವ ನೀರು ಬಳಸದಂತೆ, ಶುದ್ದೀಕರಿಸಿದ ನೀರು ಬಳಸುವಂತೆ ಆದೇಶಿಸಿದ್ದೇನೆ,ಕೆ.ಸಿ.ವ್ಯಾಲಿ ರೀತಿ ಬೆಂಗಳೂರಿನ ಕೆರೆಗಳನ್ನೂ ಭರ್ತಿ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಸಿಎಂ ಹೇಳಿದರು.
ಕುಡಿಯುವ ನೀರಿಗೆ ಹಣದ ಕೊರತೆ ಇಲ್ಲ, ಬೇಕಾದಷ್ಟು ಹಣವನ್ನು ಸರ್ಕಾರ ಮತ್ತು ಬಿಬಿಎಂಪಿ ಒದಗಿಸುತ್ತಿದೆ,
ಪ್ರತಿ ದಿನ ಅಧಿಕಾರಿಗಳು ಸಭೆ ನಡೆಸಿ ವಾರಕ್ಕೊಮ್ಮೆ ಕ್ರಿಯಾಯೋಜನೆ ಸಿದ್ದಪಡಿಸುತ್ತಾರೆ,ಭವಿಷ್ಯದಲ್ಲಿ ಎಂಥಾದ್ದೇ ಸಂದರ್ಭದಲ್ಲೂ ನೀರಿನ ಕೊರತೆ ಆಗದಂತೆ ತಜ್ಞರ ಸಮಿತಿಯನ್ನು ರಚಿಸಲು ಕ್ರಮ ಕೈಗೊಳ್ಳಲಾಗಿದೆ,ಬೆಂಗಳೂರಿಗೆ 500 ಎಂ ಎಲ್ ಡಿ ನೀರು ಕೊರತೆ ಇದ್ದು,ಇದನ್ನು ನೀಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.