Tue. Dec 24th, 2024

ಶ್ರದ್ಧಾ ಭಕ್ತಿಯಿಂದ ಜರುಗಿದ ಸಾಮೂಹಿಕ ಅಕ್ಷರಾಭ್ಯಾಸ

Share this with Friends

ಮೈಸೂರು, ಫೆ.14: ಕೆ ಎಂ ಪಿ ಕೆ ಚಾರಿಟಬಲ್ ಟ್ರಸ್ಟ್ ವತಿಯಿಂದ ಸಾಮೂಹಿಕ ಅಕ್ಷರಭ್ಯಾಸ ಹಾಗೂ ಸರಸ್ವತಿ ಪೂಜೆ ಶ್ರದ್ಧಾ ಭಕ್ತಿಯಿಂದ ನೆರವೇರಿತು.

ಮೈಸೂರಿನ ವಿಶ್ವೇಶ್ವರ ನಗರದಲ್ಲಿರುವ ಮಹರ್ಷಿ ಪಬ್ಲಿಕ್ ಶಾಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

150ಕ್ಕೂ ಹೆಚ್ಚು ಮಕ್ಕಳು ಅಕ್ಷರಭ್ಯಾಸದಲ್ಲಿ ಪಾಲ್ಗೊಂಡಿದ್ದರು, ಮೈಸೂರಿನ ಅವನಿ ಶೃಂಗೇರಿ ಮಠದ ವೇದಬ್ರಹ್ಮ ನಾಗರಾಜ ಶಾಸ್ತ್ರಿಗಳ ನೇತೃತ್ವದಲ್ಲಿ ಸರಸ್ವತಿ ಪೂಜೆ ನೆರವೇರಿತು.

ಆನಂತರ ಪೋಷಕರು ಮಕ್ಕಳಿಗೆ ಕೈಹಿಡಿದು ಅಕ್ಕಿಯಲ್ಲಿ ಓಂಕಾರ ಮತ್ತು ಗಣೇಶನಾಮ ಹಾಗೂ ಕನ್ನಡದಲ್ಲಿ ಅ ಆ ಇ ಈ ಬರೆಸುವುದರ ಮೂಲಕ ಅಕ್ಷರಭ್ಯಾಸ ಮಾಡಿಸಿದರು.

ಈ‌ ವೇಳೆ ಮಹರ್ಷಿ ಶಿಕ್ಷಣ ಸಂಸ್ಥೆಯ ಕಾರ್ಯ ನಿರ್ವಾಹಣಾಧಿಕಾರಿ ತೇಜಸ್ ಶಂಕರ್ ಮಾತನಾಡಿ ಪುರಾಣ ನಂಬಿಕೆಯ ಪ್ರಕಾರ ಸರಸ್ವತಿ ಪೂಜೆ ಮಾಡಿದರೆ ಮಕ್ಕಳ ನಾಲಿಗೆಯ ಮೇಲೆ ಸರಸ್ವತಿ ದೇವಿ ನೆಲೆಸಿ ಮಕ್ಕಳ ಶೈಕ್ಷಣಿಕ ಬದುಕು ಉತ್ತಮವಾಗಿರುತ್ತವೆ ಎಂಬ ನಂಬಿಕೆಯಿದೆ ಎಂದು ಹೇಳಿದರು

ಮೈಸೂರು ನಗರ ಮತ್ತು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ ಪ್ರಕಾಶ್ ಮಾತನಾಡಿ ಸಾಮೂಹಿಕ ವಿವಾಹವನ್ನು ಸರ್ಕಾರದ ವತಿಯಿಂದ ತಂದಿರುವ ಸಪ್ತಪದಿ ಯೋಜನೆಯಂತೆ ಅಕ್ಷರಭ್ಯಾಸ ಕಾರ್ಯಕ್ರಮವನ್ನ ರಾಜ್ಯದ ಎಲ್ಲಾ ಶಾಲೆಗಳಲ್ಲೂ ಹಮ್ಮಿಕೊಳ್ಳುವಂತೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ಹೇಳಿದರು.

ಪುರಾಣದಲ್ಲಿ ಪಾರ್ವತಿದೇವಿ ತನ್ನ ಮಗು ಗಣೇಶನಿಗೂ ಸಹ ಅಕ್ಷರಾಭ್ಯಾಸ ಕಲಿಸಿದ ಉಲ್ಲೇಖವಿದೆ, ಮಗು ಪೋಷಕರಿಂದ ಕಲಿತ ಮೊದಲ ಅಕ್ಷರದಲ್ಲಿರುವ ಆಸಕ್ತಿ, ಶ್ರಮಪಟ್ಟ ಕನಸನ್ನ ಕಂಡ ಪೋಷಕರು ಅದೇ ರೀತಿಯಲ್ಲೆ ಸನ್ಮಾರ್ಗದ ಕಡೆ ಮಗು ಬೆಳೆಯುವಂತೆ ನೋಡಿಕೊಳ್ಳುವುದು ಅವರ ಕರ್ತವ್ಯವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ಅಜಯ್ ಶಾಸ್ತ್ರಿ,ಸವಿತಾ ಘಾಟ್ಕೆ,
ಶಾಲೆಯ ಹಿರಿಯ ಪ್ರಾಂಶುಪಾಲರಾದ ಕೆ ಆರ್ ಗೋಪಾಲಸ್ವಾಮಿ, ಶಿಕ್ಷಕರಾದ ರಾಘವೇಂದ್ರ, ಪ್ರಿಯಾಂಕ, ಅನಿತಾ‌ ಮತ್ತಿತರರು ಹಾಜರಿದ್ದರು.


Share this with Friends

Related Post