Thu. Jan 9th, 2025

ವಾಣಿಜ್ಯ ತೆರಿಗೆ ಇಲಾಖೆ ಪ್ರಗತಿ ಪರಿಶೀಲನಾ ಸಭೆ;ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ: ಸಿಎಂ

Share this with Friends

ಬೆಂಗಳೂರು, ಜೂ.11: ವರ್ಗಾವಣೆ ವೇಳೆ ತೆರಿಗೆ ಸಂಗ್ರಹದಲ್ಲಿ ನಿಮ್ಮ ಕಾರ್ಯ ಕ್ಷಮತೆಯನ್ನು ಮಾನದಂಡವಾಗಿ ಪರಿಗಣಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.

ವಾಣಿಜ್ಯ ತೆರಿಗೆ ಇಲಾಖೆ ಮತ್ತು ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆ ನಡೆಸಿದ ಪ್ರಗತಿ ಪರಿಶೀಲನಾ ಸಭೆ ವೇಳೆ ಸಿದ್ದರಾಮಯ್ಯ ಈ ರೀತಿ ಎಚ್ಚರಿಕೆ ನೀಡಿದರು.

ಗುರಿ ಸಾಧಿಸದಿದ್ದರೆ ಶಿಸ್ತು ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ, ವರ್ಗಾವಣೆ ವೇಳೆ ನಿಮ್ಮ ಕಾರ್ಯಕ್ಷಮತೆಯೇ ಮಾನದಂಡ, ಬೇರೆ ಯಾವ ಪ್ರಭಾವಕ್ಕೂ ನಾನು ಮಣೆ ಹಾಕುವುದಿಲ್ಲ, ಅಂದಾಜು, ಜಾರಿ, ಮೇಲ್ಮನವಿ ತಂಡಗಳು ಸಹಕಾರದೊಂದಿಗೆ ಕೆಲಸ ಮಾಡಿ ಎಂದು ಸೂಚಿಸಿದರು.

ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಹಾಗೂ ಕಾರ್ಯದರ್ಶಿ ಪಿ.ಸಿ.ಜಾಫರ್, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ.ಶಿಖಾ ಸಭೆಯಲ್ಲಿ ಉಪಸ್ಥಿತರಿದ್ದರು.


Share this with Friends

Related Post