Mon. Dec 23rd, 2024

ಪ್ರಚೋದನಕಾರಿಯಾಗಿ ಹೇಳಿಕೆ: ಸಚಿವ ಶಿವರಾಜ ತಂಗಡಗಿ ವಿರುದ್ಧ ದೂರು

Shivaraj Tangadagi
Share this with Friends

ಕೊಪ್ಪಳ.ಮಾ.26 : ಭಾರತೀಯ ಜನತಾ ಪಕ್ಷದ ಸರ್ಕಾರ ಕಳೆದ 10 ವರ್ಷಗಳಲ್ಲಿ 20 ಕೋಟಿ ಉದ್ಯೋಗಗಳನ್ನು ನೀಡಲು ವಿಫಲವಾಗಿದೆ. ಆದರೆ ಇನ್ನೂ ಮೋದಿ, ಮೋದಿ ಎಂದು ಹೊಗಳುವ ಯುವಕರಿಗೆ “ಕಪಾಳಮೋಕ್ಷ” ಮಾಡಬೇಕು ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಸಚಿವ ಶಿವರಾಜ ತಂಗಡಗಿ ವಿರುದ್ಧ ದೂರು ದಾಖಲಾಗಿದೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ಅವರು ಲೋಕಸಭಾ ಚುನಾವಣೆಯ ಕೊಪ್ಪಳ ಕ್ಷೇತ್ರದ ತಮ್ಮ ಪಕ್ಷದ ಅಭ್ಯರ್ಥಿ ಕೆ. ರಾಜಶೇಖರ ಹಿಟ್ನಾಳ ಪರ ಪ್ರಚಾರ ಮಾಡುವ ಸಮಯದಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ ಕಾರಣಕ್ಕಾಗಿ ವಿರುದ್ಧ ಜಿಲ್ಲೆಯ ಕಾರಟಗಿ ಪೊಲೀಸ್ ಠಾಣೆಯಲ್ಲಿ ಮಂಗಳವಾರ ದೂರು ದಾಖಲಾಗಿದೆ

ಶಿವರಾಜ ತಂಗಡಗಿ ತಮ್ಮ ಭಾಷಣದಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿದ್ದಾರೆ. ಅವರ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ಕಾರಟಗಿಯಲ್ಲಿ ಚುನಾವಣಾಧಿಕಾರಿಯಾಗಿ ಕೆಲಸ ಮಾಡುತ್ತಿರುವ ಗಂಗಾವತಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಧಿಕಾರಿ ಗ್ಯಾನನಗೌಡ ನಂದನಗೌಡ ದೂರು ನೀಡಿದ್ದಾರೆ.


Share this with Friends

Related Post