Fri. Nov 1st, 2024

ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆ ಬಿಡುಗಡೆ

Share this with Friends

ನವದೆಹಲಿ,ಏ.5: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು ದೇಶಾದ್ಯಂತ ಜಾತಿಗಣತಿ ಮಾಡುವುದಾಗಿ ಭರವಸೆ ನೀಡಿದೆ.

ದೆಹಲಿಯ ಕೇಂದ್ರ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ನಾಯಕರಾದ ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ, ವೇಣುಗೋಪಾಲ್‌, ಚಿದಂಬರಂ ಅವರು ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

ನಿರುದ್ಯೋಗವನ್ನು ಕೇಂದ್ರೀಕರಿಸಿ, ಸಾಮಾಜಿಕ ಆರ್ಥಿಕ ಜಾತಿ ಗಣತಿ ಮಾಡುವುದಾಗಿ ಕಾಂಗ್ರೆಸ್‌ ಪ್ರಕಟಿಸಿದೆ.

ಪ್ರಣಾಳಿಕೆಯ ಮುಖಪುಟದಲ್ಲಿ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್‌ ಗಾಂಧಿ ಅವರ ಚಿತ್ರವಿದೆ. ಪ್ರಣಾಳಿಕೆಗೆ ನ್ಯಾಯ ಪತ್ರ ಎಂದು ಹೆಸರನ್ನು ಇಡಲಾಗಿದ್ದು ರಾಹುಲ್‌ ಗಾಂಧಿ ಅವರ ಭಾರತ್‌ ಜೋಡೋ ಯಾತ್ರೆಯ ಫೋಟೋವನ್ನು ಹಾಕಲಾಗಿದೆ.

ದೇಶಾದ್ಯಂತ ಜಾತಿ ಗಣತಿ, ಹಿರಿಯ ನಾಗರಿಕರಿಗೆ ಸಾರ್ವಜನಿಕ ಸಾರಿಗೆ (ರೈಲು ಮತ್ತು ರಸ್ತೆ) ಯಲ್ಲಿ ರಿಯಾಯಿತಿ ದರದಲ್ಲಿ ಪ್ರಯಾಣ ಮರುಜಾರಿ,
ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್‌ ಕಾಲೇಜು/ಆಸ್ಪತ್ರೆ, ಆಶಾ,ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರ ಕೇಂದ್ರದ ಪಾಲು ದ್ವಿಗುಣ
2500ಕ್ಕಿಂತ ಜನಸಂಖ್ಯೆ ಜಾಸ್ತಿ ಇರುವ ಹಳ್ಳಿಗಳಲ್ಲಿ ಎರಡನೇ ಆಶಾ ಕಾರ್ಯಕರ್ತೆ ನೇಮಕ,12ನೇ ತರಗತಿಯವರೆಗೆ ಮಧ್ಯಾಹ್ನದ ಬಿಸಿಯೂಟ.ಇವು ಪ್ರಮುಖ ಅಂಶಗಳು.


Share this with Friends

Related Post