Wed. Dec 25th, 2024

ಕಾಂಗ್ರೆಸ್ ನವರಿಗೆ ಕಾನೂನಿನ ತಿಳಿವಳಿಕೆಯೇ ಇಲ್ಲ:ಹೆಚ್ ಡಿ ಕೆ

Share this with Friends

ಬೆಂಗಳೂರು,ಮೇ.25: ರಾಜತಾಂತ್ರಿಕ ಪಾಸ್ ಪೋರ್ಟ್ ಬಗ್ಗೆ ಮಾತನಾಡುತ್ತಿದ್ದಾರೆ,ಆದರೆ ಕಾಂಗ್ರೆಸ್ ನವರಿಗೆ ಕಾನೂನಿನ ತಿಳಿವಳಿಕೆಯೇ ಇಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಟೀಕಿಸಿದರು.

ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,ಈಗ ಪ್ರಜ್ವಲ್ ಗೆ ವಾಪಸ್ ಕರೆದುಕೊಂಡು ಬರಲು ಪತ್ರ ಬರೆದಿದ್ದಾರೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಬೇಕು ಎಂದು ಕೇಳಿದ್ದಾರೆ ತಕ್ಷಣಕ್ಕೆ ಅದು ಸಾಧ್ಯವಾಗಲಾರದು ಎಂದು ಅವರು ಹೇಳಿದರು.

ಇದೆಲ್ಲಾ ಪ್ರಕ್ರಿಯೆ ಸಾಕಷ್ಟು ದಿನ ಆಗಬಹುದು ಎಂಬ ಕಾರಣಕ್ಕೆ ತಕ್ಷಣ ವಾಪಸ್ ಬಂದು ತನಿಖೆಗೆ ಹಾಜರಾಗು ಎಂದು ಪ್ರಜ್ವಲ್ ಗೆ ಸಂದೇಶ ಕೊಟ್ಟಿದ್ದೇನೆ,ದೇವೇಗೌಡರು ಕೊನೆ ಎಚ್ಚರಿಕೆ ಕೊಟ್ಟಿದ್ದಾರೆ. ಆದರೆ, ಮಾಧ್ಯಮ ಹೇಳಿಕೆ ಮೂಲಕ ದೇವೇಗೌಡರು ನೀಡಿದ ಎಚ್ಚರಿಕೆ ಬಗ್ಗೆ ಮುಖ್ಯಮಂತ್ರಿಗಳು ಹಗುರವಾಗಿ ಮಾತಮಾಡುತ್ತಿದ್ದಾರೆ, ಎಷ್ಟು ವರ್ಷ ಇವರು ದೇವೆಗೌಡರ ಜತೆ ಕೆಲಸ ಮಾಡಿದ್ದಾರೆ ಅವರು ಯಾವ ರೀತಿ ರಾಜಕಾರಣ ಮಾಡಿದ್ದಾರೆ ಎನ್ನುವುದು ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲವೇ ಎಂದು ಕುಮಾರಸ್ವಾಮಿ ಕಿಡಿ ಕಾರಿದರು.

ಇದೊಂದು ರಾಜಕೀಯ ಪಕ್ಷಾನಾ ಇವರಿಗೆ ಗೌರವ ಇದೆಯಾ, ಮಾನ ಮಾರ್ಯಾದೆ ಇದೆಯಾ ಅದೇ ನಿಮ್ಮ ಡಿ.ಕೆ.ಶಿವಕುಮಾರ್, ಅದೇ ಸಿಡಿ ಶಿವು ಮಾಡಿದ್ದು ಗೊತ್ತಿಲ್ಲವೇ? ಆ ವ್ಯಕ್ತಿಯನ್ನು ಶಿವಕುಮಾರ್ ಎನ್ನುವುದು ಉಪಯೋಗಕ್ಕೆ ಬರೋದಿಲ್ಲ. ಅವರನ್ನು ಸಿಡಿ ಶಿವು ಅಂತಲೇ ಕರೆಯಬೇಕು. ಯಾಕಪ್ಪ ಸೀಡಿ ಶಿವು ಬ್ರೋಕರ್ ಶಿವರಾಮೇಗೌಡ ಜತೆ ಮಾತನಾಡಿದೆ ಎಂದು ಏಕ‌ವಚನದಲ್ಲೇ ಹೆಚ್ ಡಿ ಕೆ ವಾಗ್ದಾಳಿ ನಡೆಸಿದರು.

ಗೃಹ ಸಚಿವರು ತನಿಖೆ ನಿಷ್ಪಕ್ಷಪಾತವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಒತ್ತಾಯುಸಿದ ಕುಮಾರಸ್ವಾಮಿ, ನಿಜವಾದ ಅಪರಾಧಿ ವಿರುದ್ಧ ಕ್ರಮ ಕೈಗೊಳ್ಳಲಿ ನಮ್ಮದೇನೂ ತಕರಾರು ಇಲ್ಲ ಎಂದು ತಿಳಿಸಿದರು

ಸರಕಾರಕ್ಕೆ ಹಾಗೂ ಅಧಿಕಾರಿಗಳಿಗೆ ಯಾರೂ ಗೌರವ ಕೊಡುವ ವಾತವರಣವಿಲ್ಲ. ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಗೌರವವಿಲ್ಲ, ಯಾಕಂದರೆ ಸರಕಾರವೇ ಆ ರೀತಿ ಇದೆ.

ರಾಜ್ಯದಲ್ಲಿ ಕಾನೂನು ಸಂಪೂರ್ಣ ಕುಸಿದಿದೆ, ಇದು ಸರಕಾರದ ಸ್ವಯಂಕೃತ ಅಪರಾಧ. ಈ ಸರಕಾರದ ಬಗ್ಗೆ ಅಧಿಕಾರಿಗಳಲ್ಲೂ ವಿಶ್ವಾಸವಿಲ್ಲ, ಜನತೆಯಲ್ಲೂ ವಿಶ್ವಾಸವಿಲ್ಲ ಎಂದು ಟೀಕಿಸಿದರು.


Share this with Friends

Related Post