Mon. Dec 23rd, 2024

ದೆಹಲಿ ಚಲೋ : ಜಂತರ್ ಮಂತರ್ ನಲ್ಲಿ ಕಾಂಗ್ರೆಸ್ ನಾಯಕ ಪ್ರೊಟೆಸ್ಟ್

COngress Protest in Delhi
Share this with Friends

ನವದೆಹಲಿ,ಫೆ.7- ಕೇಂದ್ರದಿಂದ ರಾಜ್ಯಕ್ಕಾಗುತ್ತಿರುವ ನಿರಂತರ ಅನ್ಯಾಯವನ್ನು ಖಂಡಿಸಿ ರಾಜ್ಯಸರ್ಕಾರ ದೆಹಲಿಯ ಜಂತರ್ ಮಂತರ್‍ನಲ್ಲಿಂದು ನನ್ನ ತೆರಿಗೆ ನನ್ನ ಹಕ್ಕು ಧ್ಯೇಯದ ಹೋರಾಟ ನಡೆಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ರಾಜ್ಯಸರ್ಕಾರ ಸಂಪುಟದ ಎಲ್ಲಾ ಸಚಿವರು, ಕಾಂಗ್ರೆಸ್ ಪಕ್ಷದ ಶಾಸಕರು, ಸಂಸದರು, ರಾಜ್ಯಸಭಾ ಸದಸ್ಯರು, ವಿಧಾನಪರಿಷತ್ ಸದಸ್ಯರು ಹಾಗೂ ಪ್ರಮುಖರು ಭಾಗವಹಿಸಿದ್ದರು.

ಕರ್ನಾಟಕ ರಾಜ್ಯಕ್ಕೆ ನ್ಯಾಯ ಕೊಡಿಸಿ, ಬೇಕೇ ಬೇಕು ನ್ಯಾಯ ಬೇಕು ಎಂಬ ಘೋಷಣೆಗಳ ಮೂಲಕ ಕೇಂದ್ರಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಯಾದಿಯಾಗಿ ಎಲ್ಲಾ ನಾಯಕರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಒಕ್ಕೂಟ ವ್ಯವಸ್ಥೆಯಲ್ಲಿ ಈ ರೀತಿಯ ತಾರತಮ್ಯಖಂಡನೀಯ. ದೇಶದಲ್ಲೇ ಅತೀ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಗಳ ಪೈಕಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆದರೆ ತೆರಿಗೆ ಹಂಚಿಕೆಯಲ್ಲಿ ಕೊನೆಯ ಸ್ಥಾನ ಪಡೆದಿದೆ. ಕೇಂದ್ರ ಸರ್ಕಾರ ವಿತಂಡವಾದಗಳ ಮೂಲಕ ತನ್ನ ಮಲತಾಯಿ ಧೋರಣೆಯನ್ನು ಸಮರ್ಥಿಸಿಕೊಳ್ಳುತ್ತಿರುವುದು ಖಂಡನೀಯ ಎಂದು ನಾಯಕರು ವಾಗ್ದಾಳಿ ನಡೆಸಿದರು.

ಕರ್ನಾಟಕದಿಂದ 4.30 ಲಕ್ಷ ಕೋಟಿ ರೂ. ತೆರಿಗೆ ಹಾಗೂ ಸೆಸ್‍ಗಳನ್ನು ಸಂಗ್ರಹಿಸುವ ಕೇಂದ್ರ ಸರ್ಕಾರ ರಾಜ್ಯಕ್ಕೆ ಮರಳಿ 50 ಸಾವಿರ ಕೋಟಿ ರೂ.ಗಳನ್ನು ಮಾತ್ರ ನೀಡುತ್ತಿದೆ. ನಮ್ಮ ಸಂಪನ್ಮೂಲವನ್ನೆಲ್ಲಾ ಉತ್ತರ ಭಾರತದ ರಾಜ್ಯಗಳಿಗೆ ಖರ್ಚು ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಭಾರತ-ಮಯನ್ಮಾರ್‌ ಗಡಿಯುದ್ದಕ್ಕೂ ಬೇಲಿ ಹಾಕಲಾಗುವುದಾಗಿ ಅಮಿತ್‌ ಶಾ ಘೋಷಣೆ

ಬಜೆಟ್ ಗಾತ್ರಕ್ಕನುಗುಣವಾಗಿ ತೆರಿಗೆ ಪಾಲು ಏರಿಕೆಯಾಗಿಲ್ಲ. 14, 15 ನೇ ಹಣಕಾಸು ಆಯೋಗದಿಂದ ಭಾರೀ ತಾರತಮ್ಯವಾಗಿದೆ. 11 ಸಾವಿರ ಕೋಟಿ ರೂ. ವಿಶೇಷ ಅನುದಾನವನ್ನು ರದ್ದುಪಡಿಸಲಾಗಿದೆ ಎಂದು ಟೀಕಿಸಿದರು.ಪ್ರತಿಭಟನೆ ಬಳಿಕ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಹಣಕಾಸು, ಗೃಹ ಸಚಿವರ ಭೇಟಿಗೆ ಸಮಯ ಕೇಳಲಾಗಿತ್ತು. ಪ್ರತಿಭಟನೆ ಪಕ್ಷಾತೀತವಾಗಿದ್ದು, ಜೆಡಿಎಸ್-ಬಿಜೆಪಿಯ ಸಂಸದರೂ ಭಾಗವಹಿಸಬೇಕೆಂದು ಮುಖ್ಯಮಂತ್ರಿ ಪತ್ರ ಬರೆದಿದ್ದರು. ಆದರೆ ವಿಪಕ್ಷಗಳ ಯಾವ ನಾಯಕರೂ ಪ್ರತಿಭಟನೆಯಲ್ಲಿ ಪಾಲ್ಗೊಂಡಿರಲಿಲ್ಲ.


Share this with Friends

Related Post