Mon. Dec 23rd, 2024

ಬೆಳಗಾವಿ‌‌ ಜಿಲ್ಲೆಯಲ್ಲಿ ಕಾಂಗ್ರೆಸ್ ಇತಿಹಾಸ ಸೃಷ್ಟಿಸಲಿದೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ

Share this with Friends

ಬೆಳಗಾವಿ : ಲೋಕಸಭಾ ಚುನಾವಣೆ ಅಂಗವಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ವಿಜಯನಗರ ಬೂತನಲ್ಲಿ ಕುಟುಂಬ ಸಮೇತ ಆಗಮಿಸಿ ಮತದಾನ‌ ಮಾಡಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಪರ ಉತ್ತಮ ಅಲೆಯಿದೆ. ಕ್ಷೇತ್ರದಲ್ಲಿ ಜಯ ದಾಖಲಿಸುವ ಮೂಲಕ ಕಾಂಗ್ರೆಸ್ ಹೊಸ ಇತಿಹಾಸ ಸೃಷ್ಟಿಸಲಿದೆ. ನನ್ನ ಸಹೋದರ, ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರ ಪಡೆಯೇ ನನ್ನ ದೊಡ್ಡ ಶಕ್ತಿ ಎಂದು ಹೇಳಿದರು

ಭಾರತ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬ ಮತದಾನದ ದಿನ. ಎಲ್ಲರೂ ತಪ್ಪದೇ ಮತದಾನ ಮಾಡಬೇಕು. ಉತ್ತಮ ಜನ ಪ್ರತಿನಿಧಿಯನ್ನು ಆಯ್ಕೆ ಮಾಡಬೇಕು.ಕುಟುಂಬ ಸಮೇತ ಬಂದು ಮತಹಾಕಿರುವೆ. ಈ ಬಾರಿ ನೂರಕ್ಕೆ ನೂರರಷ್ಟು ಬೆಳಗಾವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ದಾಖಲಿಸಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಹೇಳಿದರು.
ಅರಭಾವಿ, ಗೋಕಾಕ್, ಬೆಳಗಾವಿ ಉತ್ತರ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮುನ್ನಡೆಗಳಿಸಲಿದೆ. ಅಜ್ಜಯ್ಯನವರ (ನೊಣವಿನಕೆರೆಯ ಶ್ರೀ ಕಾಡಾಸಿದ್ದೇಶ್ವರದ ಸ್ವಾಮೀಜಿಗಳು) ಆಶೀರ್ವಾದವಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ವಿಧಾನ ಪರಿಷತ್ ಸದಸ್ಯ ಚೆನ್ನಾರಜ ಹಟ್ಟಿಹೊಳ್ಳಿ ಮಾತನಾಡಿ
ಚಿಕ್ಕೋಡಿ, ಬೆಳಗಾವಿ ಎರಡು ಕ್ಷೇತ್ರ ಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಜಯ ದಾಖಲಿಸಲಿದ್ದು, ಬೆಳಗಾವಿ ಸ್ವಾಭಿಮಾನಕ್ಕೆ ಗೆಲುವು ಸಿಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.


Share this with Friends

Related Post