Fri. Apr 18th, 2025

ಎಸ್ಪಿ ಕಚೇರಿ ಆವರಣದಲ್ಲೇ ಪತ್ನಿಯನ್ನು ಕೊಂದ ಕಾನ್ಸ್ ಸ್ಟೇಬಲ್

Share this with Friends

ಹಾಸನ,ಜುಲೈ.1: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ದೂರು ನೀಡಲು ಬಂದ ಪತ್ನಿಯನ್ನೇ ಕಾನ್ ಸ್ಟೇಬಲ್ ಪತಿ ಚಾಕುವಿನಿಂದ ಇರಿದು ಕೊಲೆ ಮಾಡಿದ ಹೇಯ ಘಟನೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಆವರಣದಲ್ಲೇ ನಡೆದಿದೆ.

ಹಾಸನ ನಗರ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಲೋಕನಾಥ್ ಪತ್ನಿ ಮಮತಾ ಅವರನ್ನು ಹತ್ಯೆ ಮಾಡಿದ್ದಾನೆ.

ಚಾಕುವಿನಿಂದ ಇರಿಯುತ್ತಿದ್ದನ್ನು ಕಂಡ ಪೊಲೀಸರು ತಕ್ಷಣ‌ ಧಾವಿಸಿ ಕಾನ್ಸ್ಟೇಬಲ್ ಹಿಡಿದು ಆಕೆಯ ರಕ್ಷಿಸಲಯ ಹಿಮ್ಸ್ ಆಸ್ಪತ್ರೆಗೆ ಸಾಗಿಸಿದರು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಮತಾ ಮೃತಪಟ್ಟಿದ್ದಾರೆ.

ಕಳೆದ ನಾಲ್ಕೈದು ದಿನಗಳಿಂದ ಪತಿ-ಪತ್ನಿ ನಡುವೆ ಜಗಳ ನಡೆದಿತ್ತು,ಹಾಗಾಗಿ ಇಂದು ಪತಿ ವಿರುದ್ಧ ದೂರು ನೀಡಲು ಎಸ್ಪಿ ಕಚೇರಿಗೆ ಬಂದಿದ್ದ ಪತ್ನಿ ಮಮತಾ ಮೇಲೆ ಸಿಟ್ಟಿಗೆದ್ದ ಲೋಕನಾಥ್ ಚಾಕುವಿನಿಂದ ಇರಿದುಬಿಟ್ಟಿದ್ದಾನೆ.

ಲೋಕನಾಥ್ ‌ನನ್ನು ವಶಕ್ಕೆ ಪಡೆದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


Share this with Friends

Related Post