Thu. Dec 26th, 2024

ಕಾಂಗ್ರೆಸ್ ನಿಂದ ಜಿಹಾದಿ ಕರ್ನಾಟಕ ಸೃಷ್ಟಿ: ಆರ್.ಅಶೋಕ ಆಕ್ರೋಶ

Share this with Friends

ಬೆಂಗಳೂರು, ಏ.19: ಸಿಎಂ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಂದ ನಂತರ ಜಿಹಾದಿ ಕರ್ನಾಟಕ ಸೃಷ್ಟಿಯಾಗಿದೆ ಎಂದು ಪ್ರತಿ ಪಕ್ಷದ ನಾಯಕ ಅಶೋಕ್ ಆರೋಪಿಸಿದರು.

ಹಿಂದೂಗಳ ರಕ್ತಕ್ಕೆ ಬೆಲೆಯೇ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ಕಚೇರಿಯಲ್ಲಿ ಕಾಂಗ್ರೆಸ್ ದುರಾಡಳಿತದ ಆರೋಪ ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಅಶೋಕ್,ನಮ್ಮ ರಾಜ್ಯದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆಯೇ ಇಲ್ಲ ದಂತಾಗಿದೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದಲ್ಲಿ ಹಿಂದೂಗಳ ಕಗ್ಗೊಲೆ, ಲವ್‌ ಜಿಹಾದ್‌, ಹಿಂದೂಗಳ ಮೇಲೆ ದಾಳಿ ನಡೆಯುತ್ತಿದೆ. ಲವ್‌ ಜಿಹಾದ್‌ಗೆ ಕಾಂಗ್ರೆಸ್‌ನವರು ಕೂಡ ಒಳಗಾಗಿದ್ದಾರೆ. ಹುಬ್ಬಳ್ಳಿಯಲ್ಲಿ ನಡೆದ ಲವ್‌ ಜಿಹಾದ್‌ನಲ್ಲಿ ಹಿಂದೂ ಯುವತಿ ಬರ್ಬರ ಕೊಲೆಗೀಡಾಗಿರುವುದನ್ನು ಬಿಜೆಪಿ ಉಗ್ರವಾಗಿ ವಿರೋಧಿಸುತ್ತದೆ ಕರ್ನಾಟಕವನ್ನು ಡಾನ್‌ಗಳು ನಡೆಸುತ್ತಿರುವ ಪರಿಸ್ಥಿತಿ ಇದ್ದು, ಸರ್ಕಾರ ಕಾನೂನನ್ನು ಗೂಂಡಾಗಳಿಗೆ ನೀಡಿದೆ ಎಂದು ಕಿಡಿಕಾರಿದರು.

ಇದು ಲವ್‌ ಜಿಹಾದ್‌ ಎಂದು ಯುವತಿಯ ತಂದೆ, ಕಾಂಗ್ರೆಸ್‌ ಕಾರ್ಪೊರೇಟರ್‌ ಹೇಳುತ್ತಿದ್ದಾರೆ. ಕುಟುಂಬದವರು ಕಣ್ಣೀರು ಹರಿಸುವಾಗ ಕೊಲೆಯಾದ ಯುವತಿಯ ಬಗ್ಗೆ ಹೀನಾಯವಾಗಿ ಮಾತಾಡುತ್ತಿದ್ದಾರೆ. ಚುನಾವಣೆಯಲ್ಲಿ ಇದು ಚರ್ಚೆಯಾದರೆ ಕಾಂಗ್ರೆಸ್‌ ಮುಖಕ್ಕೆ ಮಂಗಳಾರತಿಯಾಗಲಿದೆ ಎಂಬ ಕಾರಣಕ್ಕೆ ಸಿದ್ದರಾಮಯ್ಯನವರೇ ಈ ರೀತಿ ಮಾತಾಡುತ್ತಿದ್ದಾರೆ ಎಂದು ಟೀಕಿಸಿದರು.

ಲವ್‌ ಜಿಹಾದ್‌ ಮಾಡುವವರಿಗೆ ಪಾಸ್‌ಪೋರ್ಟ್‌, ಕೊಲೆ, ಗಲಭೆ ಮಾಡುವವರಿಗೆ ವೀಸಾ ನೀಡಲಾಗಿದೆ. ಬೆಳಗಾವಿಯಲ್ಲಿ ದಲಿತ ಮಹಿಳೆಯನ್ನು ಬೆತ್ತಲೆ ಮಾಡಿದ್ದಕ್ಕೆ ಆ ಪ್ರಕರಣವನ್ನೇ ಮುಚ್ಚಿಹಾಕುವ ಪ್ರಯತ್ನ ನಡೆದಿತ್ತು. ಶಿವಮೊಗ್ಗದಲ್ಲಿ ಕೋಮು ಗಲಭೆ ನಡೆದಾಗ ಪೊಲೀಸರು ಏನೂ ಮಾಡಲಿಲ್ಲ ಹೀಗೆ ಆರೋಪಗಳ ಸುರಿಮಳೆಯನ್ನೇ ಅಶೋಕ್ ಸುರಿಸಿದರು.


Share this with Friends

Related Post