Sat. Jan 11th, 2025

ಸಿ.ಟಿ ರವಿಗೆ ಅನಾಧೇಮಯ ವ್ಯಕ್ತಿಗಳಿಂದ ಕೊಲೆ ಬೆದರಿಕೆ

Share this with Friends

ಚಿಕ್ಕಮಗಳೂರು: ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ಮತ್ತು ಅವರ ಪುತ್ರ ಸೂರ್ಯನಿಗೆ ಅನಾಮಧೇಯ ವ್ಯಕ್ತಿಗಳು ಕೊಲೆ ಬೆದರಿಕೆ ಪತ್ರ ಬರೆದಿದ್ದಾರೆ.

ಸಿ.ಟಿ ರವಿ ಸ್ವಗೃಹಕ್ಕೆ ಅನಾಮಧೇಯ ವ್ಯಕ್ತಿಗಳು ಪತ್ರ ಕಳುಹಿಸಿದ್ದಾರೆ. ಇನ್ನೂ 15 ದಿನದೊಳಗೆ ಚಿಕ್ಕಮಗಳೂರಿನಿಂದ ಬೆಳಗಾವಿಗೆ ಬಂದು ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ನಿಮ್ಮ ಕೈಕಾಲ ಮುರಿದು ಸಾಯಿಸುತ್ತೇವೆ, ನಿನ್ನ ಮಗನನ್ನೂ ಸಾಯಿಸುತ್ತೇವೆ ಹುಷಾರ್ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಕುರಿತು ಸಿ.ಟಿ ರವಿ ಅವರು ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.


Share this with Friends

Related Post