Sun. Dec 29th, 2024

ದಲಿತ ಸಂಘಟನೆಗಳ ಸ್ವಾಭಿಮಾನಿ ಸಮಾವೇಶ

Share this with Friends

ಕೋಲಾರ,ಏ.11: ಕೋಲಾರ ಲೋಕಸಭಾ ಕ್ಷೇತ್ರದ ಎನ್ ಡಿ ಎ ಅಭ್ಯರ್ಥಿ ಬೆಂಬಲಿತ ದಲಿತ ಸಂಘಟನೆಗಳ ಸ್ವಾಭಿಮಾನಿ ಸಮಾವೇಶವನ್ನು ಹಮ್ಮಿಕೊಳ್ಳಲಾಯಿತು.

ಕೋಲಾರದ ನಾರಾಯಣಿ ಕನ್ವೆನ್ಷನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ದಲಿತ ಸಂಘಟನೆಗಳ ಸ್ವಾಭಿಮಾನಿ ಸಮಾವೇಶವನ್ನು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್ ಅಶೋಕ್ ಉದ್ಘಾಟಿಸಿದರು.

ಸಂವಿಧಾನ ಶಿಲ್ಪಿ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಸಮಾವೇಶವನ್ನು ಉದ್ಘಾಟಿಸಿದ್ದು ವಿಶೇಷ.

ಈ ವೇಳೆ ಮಾತನಾಡಿದ ಅಶೋಕ್‌ ನೀವೆಲ್ಲರೂ ಸ್ವಾಭಿಮಾನಿಗಳು, ಈ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು.

ಕಾಂಗ್ರೆಸ್ ನವರ ಸುಳ್ಳು ಭರವಸೆಗಳು, ಸುಳ್ಳು ಗ್ಯಾರಂಟಿಗಳನ್ನು ನಂಬಿ ಮೋಸ ಹೋಗಬೇಡಿ, ನಿಮ್ಮತನವನ್ನು ಉಳಿಸಿಕೊಳ್ಳಿ ಸ್ವಾಭಿಮಾನವನ್ನು ಮೆರೆಯಿರಿ ಎಂದು ಸಲಹೆ ನೀಡಿದರು.

ಎನ್ ಡಿ‌ಎ ಬೆಂಬಲಿತ ಅಭ್ಯರ್ಥಿ ಮಲ್ಲೇಶ್ ಬಾಬು, ದಲಿತ ನಾಯಕ ಎ. ನಾರಾಯಣಸ್ವಾಮಿ ಸೇರಿದಂತೆ ಅನೇಕ ಮುಖಂಡರು ಸಮಾವೇಶದಲ್ಲಿ ಪಾಲ್ಗೊಂಡಿದ್ದರು.


Share this with Friends

Related Post